ಕನ್ನಡ ಚಿತ್ರರಂಗದ ಹಿರಿಯ ನಟ ದಿನೇಶ್ ಅವರ ಪುತ್ರ ನಟ ಗಿರಿ ದಿನೇಶ್ (45) ಅವರು ನಿನ್ನೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.ಅವರಿಗೆ ಮದುವೆಯಾಗಿರಲ್ಲಿಲ್ಲ ಅವರ ಅಣ್ಣನ ಮನೆಯಲ್ಲಿದ್ದರು. ಶುಕ್ರವಾರ ಸಂಜೆ ಮನೆಯಲ್ಲಿ ಪೂಜೆ ಮಾಡುವಾಗ ಅವರು ಕುಸಿದು ಬಿದ್ದರು ಮತ್ತು ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿಯಲ್ಲಿ ನಿಧನರಾದರು.

ಗಿರಿ ದಿನೇಶ್ ಅವರು ಚಮಕಾಯ್ಸಿ ಚಿಂದಿ ಉಡಾಯ್ಸಿ, ವಜ್ರ ಸೇರಿ ಕೆಲ ಚಿತ್ರಗಳಲ್ಲಿ ನಟಿಸಿದ್ದರು.ನವಗ್ರಹ ಸಿನಿಮಾದಲ್ಲಿ 9 ಮಂದಿ ಖಳನಟರ ಪುತ್ರರು ನಟಿಸಿದ್ದರು. ಇದರಲ್ಲಿ ಹಿರಿಯ ಖಳನಟ ಹಾಗೂ ಹಾಸ್ಯನಟ ದಿನೇಶ್ ಅವರ ಪುತ್ರ ಗಿರಿ ಕೂಡ ಒಬ್ಬರಾಗಿದ್ದರು.ನವಗ್ರಹ ಚಿತ್ರದ ಶೆಟ್ಟಿ ಪಾತ್ರ ಹೆಚ್ಚಿನ ಹೆಸರು ತಂದುಕೊಟ್ಟಿತ್ತು. ದಿನಕರ್ ನಿರ್ದೇಶನದ ನವಗ್ರಹ ಚಿತ್ರವನ್ನು ಮೀನಾ ತೂಗುದೀಪ ನಿರ್ಮಾಣ ಮಾಡಿದ್ದರು. ಈ ಚಿತ್ರ 2008ರಲ್ಲಿ ಬಿಡುಗಡೆಯಾಗಿತ್ತು. ಕಳೆದ ವರ್ಷ ನವೆಂಬರ್ 8ರಂದು ಮರುಬಿಡುಗಡೆಯಾಗಿತ್ತು.

