ಕಡಬ : ಬಾಲಿವುಡ್ ನಟಿ ಕತ್ರಿನಾ ಕೈಫ್ ಮಾರ್ಚ್ 11ರ ಮಂಗಳವಾರ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದಾರೆ.
ಮುಖಕ್ಕೆ ಮಾಸ್ಕ್ ಹಾಕಿ, ತಲೆಗೆ ದುಪ್ಪಟ್ಟ ಧರಿಸಿ ತನ್ನ ಸ್ನೇಹಿತರೊಂದಿಗೆ ಆಗಮಿಸಿದ ನಟಿ ಇಂದು ಮತ್ತೆ ನಾಳೆ ಕ್ಷೇತ್ರದಲ್ಲಿ ಇದ್ದುಕೊಂಡು ಸರ್ಪ ಸಂಸ್ಕಾರ ಸೇವೆಯಲ್ಲಿ ಭಾಗವಹಿಸಲಿದ್ದಾರೆ.

ಕತ್ರೀನಾ ಕೈಫ್ ಮತ್ತು ವಿಕ್ಕಿ ಕೌಶಲ್ 2021ರಲ್ಲಿ ಮದುವೆಯಾಗಿದ್ದಾರೆ. ಮದುವೆಯಾಗಿ ನಾಲ್ಕು ವರ್ಷಗಳಾದರೂ ಮಕ್ಕಳಾಗಿಲ್ಲ.ಇದೀಗ ಕತ್ರಿನಾ ಕೈಫ್ ಅವರೂ ಕೂಡ ಸಂತಾನ ಪ್ರಾಪ್ತಿಗಾಗಿ ಕುಕ್ಕೆಯಲ್ಲಿ ಸರ್ಪ ಸಂಸ್ಕಾರ ಪೂಜೆ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ..

