ಮಂಗಳೂರು : ಶ್ರೀ ಕ್ಷೇತ್ರ ಮಧೂರಿನಲ್ಲಿ ಜರಗಲಿರುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮಂಗಳೂರಿನಲ್ಲಿ ಹೊರೆಕಾಣಿಕೆ ಸಂಗ್ರಹಣಾ ಕೇಂದ್ರದ ಉದ್ಘಾಟನೆಯು ನಾಳೆ ತಾ.15, ಶನಿವಾರ ಬೆಳಿಗ್ಗೆ ಗಂಟೆ 10-00 ಕ್ಕೆ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಜರಗಲಿರುವುದು.
ಕೊಂಡೆವೂರಿನ ಪ.ಪೂ.ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ, ಕಟೀಲು ಹರಿನಾರಾಯಣ ಆಸ್ರಣ್ಣ, ಮಧೂರು ಕ್ಷೇತ್ರದ ತಂತ್ರಿಗಳಾದ ದೇರೆಬೈಲು ಶಿವಪ್ರಸಾದ್ ತಂತ್ರಿ, ಶರವು ರಾಘವೇಂದ್ರ ಶಾಸ್ತ್ರಿ , ಇತರ ಧಾರ್ಮಿಕ ಕ್ಷೇತ್ರಗಳ ಪ್ರಮುಖರು, ಸಂಸದರು, ಶಾಸಕರು. ಜನಪ್ರತಿನಿಧಿಗಳು ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಹೊರೆಕಾಣಿಕೆ ಸಂಗ್ರಹಣಾ ಕೇಂದ್ರವನ್ನು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ|ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಲಿರುವರು
ಬನ್ನಿ ಭಾಗವಹಿಸಿ
ಎಸ್.ಪ್ರದೀಪ ಕುಮಾರ ಕಲ್ಕೂರ , 9845083736



