ಮಂಗಳೂರು: ಏಪ್ರಿಲ್ 18 ರಂದು ಮಂಗಳೂರು-ಬೆಂಗಳೂರು ಹೆದ್ದಾರಿಯ ಅಡ್ಯಾರ್-ಕಣ್ಣೂರಿನ ಶಾ ಗಾರ್ಡನ್ ಮೈದಾನದಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 9ಗಂಟೆಗಳ ವರೆಗೆ ನಡೆಯಲಿರುವ ಪ್ರತಿಭಟನಾ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯ ಜನರು ಭಾಗವಹಿಸುವ ಸಾಧ್ಯತೆ ಇರುವುದರಿಂದ , ಪಡೀಲ್ ಮತ್ತು ಬಿ.ಸಿ.ರೋಡ್ ನಡುವಿನ ಸಂಚಾರವನ್ನು ನಿರ್ಬಂಧಿಸಿದ್ದ ಮಂಗಳೂರು ಪೋಲಿಸ್ ಕಮೀಷನ್ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದ್ದು ರಸ್ತೆ ಸಂಚಾರಕ್ಕೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರಕ್ಕೆ ಕಟ್ಟುನಿಟ್ಟಿನ ಆದೇಶ ನೀಡಿದೆ.

ರಾಜೇಶ್ ಅರ್ಕುಳ ಎಂಬವರು ಸಲ್ಲಿಸಿದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ನ್ಯಾಯಪೀಠ ವಕ್ಛ್ ತಿದ್ದುಪಡಿ ವಿಚಾರ ಸುಪ್ರೀಂ ಕೋರ್ಟ್ ಪರಿಗಣಿಸುವಾಗ ಪ್ರತಿಭಟನೆ ಸರಿಯಲ್ಲ ಅಲ್ಲದೆ ರಾಷ್ಟ್ರೀಯ ಹೆದ್ದಾರಿ ಎನ್.ಎಚ್ 73 ಬಂದ್ ಮಾಡಿ ಪ್ರತಿಭಟನೆ ನಡೆಸುವಂತಿಲ್ಲ ಅಲ್ಲದೆ ಸರ್ಕಾರ ಸೂಚಿಸಿದ ಸ್ಥಳದಲ್ಲಿ ಮಾತ್ರ ಪ್ರತಿಭಟನೆ ನಡೆಸಬೇಕು ಸರ್ಕಾರ ಅನುಮತಿ ನೀಡುವಾಗ ಸುಪ್ರೀಂ ಕೋರ್ಟ್ ವಿಚಾರಣೆ ಗಮನದಲ್ಲಿಟ್ಟು ಕೊಳ್ಳಬೇಕು ಎಂದು ಹೇಳಿದೆ.

