ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಇಂದು ಬೆಳ್ಳಿಗ್ಗೆ ಜಾವ ಗುಂಡಿನ ದಾಳಿ ನಡೆದಿದ್ದು ಗಂಭೀರ ಗಾಯಗೊಂಡ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳ್ಳಗಿನ ಜಾವ 12:30 ಕ್ಕೆ ತನ್ನ ಬಿಡದಿ ಮನೆಯಿಂದ ಕಾರಿನಿಂದ ಹೊರಬರುತ್ತಿದ್ದಂತೆ ರಿಕ್ಕಿ ರೈ ಮೇಲೆ ಮನೆಯ ಕಾಂಪೌಂಡಿನ ಬಳಿ ಅವಿತು ಕೊಂಡಿದ್ದ ಮೂವರು ದುಷ್ಕರ್ಮಿಗಳು ರೈ ಮೇಲೆ ಫೈರಿಂಗ್ ಮಾಡಿದ್ದಾರೆ.ಗುಂಡಿನ ದಾಳಿಯಿಂದಾಗಿ ರಿಕ್ಕಿ ರೈಯ ಕೈ,ಮೂಗಿನ ಮೇಲೆ ಗಂಭೀರ ಗಾಯವಾಗಿದ್ದು ಕೂಡಲೇ ಅವರನ್ನು ಬಿಡದಿಯ ಆಸ್ಪತ್ರೆಗೆ ಪ್ರಥಮ ಚಿಕ್ಕಿತ್ಸೆಗೆ ದಾಖಲಿಸಲಾಗಿದ್ದು ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ

ಎರಡು ದಿನಗಳ ಹಿಂದೆಯಷ್ಟೇ ರಷ್ಯಾದಿಂದ ಬಿಡದಿಗೆ ಬಂದಿದ್ದ ರಿಕ್ಕಿ ರೈ ಇಂದು ಬೆಳ್ಳಗ್ಗೆ ಬೆಂಗಳೂರಿಗೆ ತೆರಳಲು ತನ್ನ ಡೈವರ್ ಹಾಗೂ ಗನ್ ಮ್ಯಾನ್ ಜೊತೆ ಹೊರಡುತ್ತಿದ್ದಾಗ ಈ ದಾಳಿ ನಡೆದಿದೆ.ಯಾವಾಗಲೂ ಡೈವರ್ ಸೀಟಿನಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ರೈ ಇಂದು ಹಿಂದಿನ ಸೀಟಿನಲ್ಲಿ ಕುಳಿತ್ತಿದ್ದರು.

ಶೂಟೌಟ್ನಲ್ಲಿ ದುಷ್ಕರ್ಮಿಗಳು ಡ್ರೈವಿಂಗ್ ಸೀಟ್ನನ್ನೇ ಗುರಿಯಾಗಿಸಿ 2 ಸುತ್ತು ಗುಂಡುಗಳನ್ನು ಹಾರಿಸಿದ್ದಾರೆ. ರಿಕ್ಕಿ ರೈ ಸಾಮಾನ್ಯವಾಗಿ ತಾನೇ ಕಾರು ಚಾಲನೆ ಮಾಡುತ್ತಿದ್ದ ಕಾರಣ, ದಾಳಿಕೋರರು ಡ್ರೈವಿಂಗ್ ಸೀಟನ್ನೇ ಟಾರ್ಗೆಟ್ ಮಾಡಿದ್ದರು. ಆದ್ರೆ ಈ ಬಾರಿ ಕಾರನ್ನು ಚಾಲಕ ರಾಜು ಚಲಾಯಿಸುತ್ತಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಪಕ್ಕದ ಸೀಟ್ನಲ್ಲಿದ್ದ ರಿಕ್ಕಿ ರೈ ಅವರ ಮೂಗು ಮತ್ತು ಕೈಗೆ ಗುಂಡು ತಾಕಿದ್ದು, ಗಂಭೀರ ಗಾಯಗೊಂಡಿದ್ದಾರೆ
ದಾಳಿಗೂ ಮುನ್ನ ಅವರ ಮೊಬೈಲಿಗೆ ಎರಡು ಬಾರಿ ಬೆದರಿಕೆ ಕರೆಗಳು ಬಂದಿದ್ದವು ಅಲ್ಲದೆ ದಾಳಿಗೆ ನಿಖರ ಕಾರಣ ಏನೆಂದು ತಿಳಿದು ಬಂದಿಲ್ಲ ಪ್ರಕರಣ ದಾಖಲಿಸಿದ ಪೋಲಿಸರು ತನಿಖೆ ನಡೆಸುತ್ತಿದ್ದಾರೆ.

