ತುಮಕೂರು : ಜೀನಿ ಸಂಸ್ಥೆಯ ಮಾಲೀಕ ದಿಲೀಪ್ ಕುಮಾರನಿಗೆ ಜೀನಿ ಕುಡಿದು ಯಾವ ಪರಿ ಹೀಟ್ ಆಗಿದೆಯೋ ಗೊತ್ತಿಲ್ಲ.ಇತನ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ಆರೋಪದ ಮೇಲೆ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಯರಗುಂಟೆಯಲ್ಲಿರುವ ಜೀನಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮೇಘನಾ ಎಂಬವರು ಕಳೆದ ಹತ್ತು ತಿಂಗಳ ಹಿಂದೆ ಕೆಲಸಕ್ಕೆ ಸೇರಿದ್ದರು ಆದರೆ ಕಳೆದ ಹದಿನೈದು ದಿನಗಳಿಂದ ಮಾಲಕರಾದ ದಿಲೀಪ್ ಕುಮಾರ್ ತನ್ನೊಂದಿಗೆ ಅಸಭ್ಯವಾಗಿ ಮಾತನಾಡಿ ಮೈ ಕೈ ಮುಟ್ಟಿ ಎಳೆದಾಡಿದ್ದಾರೆ ನಾನು ಬೇಡ ಎಂದು ಬೇಡಿಕೊಂಡರು ಬಿಡದೆ ಲೈಂಗಿಕ ದೌರ್ಜನ್ಯ ಯತ್ನಿಸಿದ್ದು ಒಂದು ವೇಳೆ ಸಹಕರಿಸದಿದ್ದರೆ ಕೆಲಸದಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ.ಇದರಿಂದ ನೊಂದ ಮಹಿಳೆ ಕಳ್ಳಂಬೆಳ್ಳ ಪೊಲೀಸ್ ಠಾಣೆಗೆ ದೂರು ನೀಡಿದ್ದು ದೂರು ದಾಖಲಿಸಿದ ಪೊಲೀಸರು ದಿಲೀಪ್ ಕುಮಾರನ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ

ಇದಲ್ಲದೇ ಈತನ ವಿರುದ್ಧ ಆತನ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಬಡ ಮಹಿಳೆಯರ ಮೇಲೂ ಇದೇ ರೀತಿ ಲೈಂಗಿಕ ಕಿರುಕುಳದ ಆರೋಪಗಳು ಬರುತ್ತಿದ್ದು ಒಂದು ವೇಳೆ ಪೊಲೀಸರು ಯಾವುದೇ ಒತ್ತಡಕ್ಕೆ ಮಣಿದು ಕಾನೂನಾತ್ಮಕ ಕ್ರಮ ಕೈಗೊಳ್ಳದಿದ್ದರೆ ಮೇಲಾಧಿಕಾರಿಗಳಿಗೆ ದೂರು ನೀಡಲಾಗುವುದು ಎಂದು ಸಂತ್ರಸ್ತ ಮಹಿಳೆ ಹೇಳಿದ್ದಾರೆ.
ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಸಂಸ್ಥೆಯ ಮಾಲಕ ದಿಲೀಪ್ ಕುಮಾರ್ ನನ್ನ ಬೆಳವಣಿಗೆಯನ್ನು ಸಹಿಸದ ಕೆಲವರು ಮಹಿಳೆಯನ್ನು ಮುಂದಿಟ್ಟು ಕೊಂಡು ನನ್ನ ವಿರುದ್ದ ಇಂತಹ ಸುಳ್ಳು ಅರೋಪ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.


