ಕಾರ್ಕಳ : ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ಅವರು ಅಕಾಲಿಕವಾಗಿ ನಿಧನರಾಗಿದ್ದಾರೆ. ಉಡುಪಿಯ ಕೆಮ್ಮಣ್ಣು ನಿವಾಸಿಯವರಾದ ರಾಕೇಶ್ ಪೂಜಾರಿ ( 33) ಅವರು ಜೀ ಕನ್ನಡದ ಕಾಮಿಡಿ ಕಿಲಾಡಿ- 3 ರ ವಿಜೇತರಾಗಿದ್ದರು. ನಿನ್ನೆ ಕಾರ್ಕಳದ ನಿಟ್ಟೆ ಗ್ರಾಮದಲ್ಲಿ ತನ್ನ ಸ್ನೇಹಿತನ ಮನೆಯಲ್ಲಿ ನಡೆಯುತ್ತಿದ್ದ ಮೆಹಂದಿ ಕಾರ್ಯಕ್ರಮದಲ್ಲಿ ಹೃದಯಘಾತ ಸಂಭವಿಸಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರಂಗಭೂಮಿ ಮತ್ತು ಕಿರುತೆರೆ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ರಾಕೇಶ್ ಪೂಜಾರಿ ಅವರು ತಮ್ಮ ಅದ್ಭುತ ಹಾಸ್ಯ ಪ್ರತಿಭೆಯಿಂದ ಅನೇಕರ ಮನ ಗೆದ್ದಿದ್ದರು


