ಮಂಗಳೂರು : ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ ಮಠದ ವತಿಯಿಂದ ನಡೆಸಲ್ಪಡುವ ಅಮೃತ ವಿದ್ಯಾಲಯಂ ವಿದ್ಯಾಸಂಸ್ಥೆಯು ಸತತ 26 ನೇಯ ವರ್ಷವೂ ಶೇಕಡಾ 100 ಫಲಿತಾಂಶ ಬಂದಿರುತ್ತದೆ.
ಶೇಕಡಾ 41 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ ಹಾಗೂ ಶೇಕಡಾ 51 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯೊಂದಿಗೆ ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇಕಡಾ 100 ಫಲಿತಾಂಶ ಬಂದಿರುತ್ತದೆ ಎಂದು ಶಾಲಾ ಆಡಳಿತ ಮಂಡಳಿಯ ಪ್ರಕಟನೆಯಲ್ಲಿ ತಿಳಿಸಿದೆ.

