ಬೆಂಗಳೂರು: ಮೈಸೂರು ಸ್ಯಾಂಡಲ್ ಸೋಪ್ಗೆ ಬ್ಯಾಂಡ್ ರಾಯಭಾರಿಯಾಗಿ ತಮನ್ನಾನು ಬೇಡ ಸುಮನ್ನಾನು ಬೇಡ. ಸಿಎಂ, ಡಿಸಿಎಂ, ಸೇರಿದಂತೆ ರಾಜ್ಯದ ಎಲ್ಲಾ ಮಂತ್ರಿಗಳು ಶಾಸಕರು ಸ್ಯಾಂಡಲ್ ಸೋಪಿನಲ್ಲಿ ಸ್ನಾನ ಮಾಡಿದರೆ ಸಾಕು. ಎಲ್ಲರೂ ನಮ್ಮ ಮೈಸೂರು ಸ್ಯಾಂಡಲ್ ಸೋಪ್ ಬಳಸಿ, ನಾನೇ ಫ್ರೀಯಾಗಿ ರಾಯಭಾರಿ ಆಗ್ತೀನಿ ಎಂದು ಎಂದು ಕನ್ನಡಪರ ಹೋರಾಟಗಾರ ಹಾಗೂ ವಾಟಾಳ್ ಪಕ್ಷದ ಸಂಸ್ಥಾಪಕ ವಾಟಾಳ್ ನಾಗರಾಜ್ ಆಗ್ರಹಿಸಿದ್ದರು.

ರಾಜ್ಯದ ಮುಖ್ಯಮಂತ್ರಿ, ಡಿಸಿಎಂ, ಸೇರಿದಂತೆ ರಾಜ್ಯದ ಎಲ್ಲಾ ಮಂತ್ರಿಗಳು, ಶಾಸಕರು ಸ್ಯಾಂಡಲ್ ಸೋಪಿನಲ್ಲಿ ಸ್ನಾನ ಮಾಡಿ ಸಾಕು. ಇವರೆಲ್ಲಾ ಮೈಸೂರು ಸ್ಯಾಂಡಲ್ ಸೋಪಿನಲ್ಲಿ ಸ್ನಾನ ಮಾಡಿದರೆ ಅವರೇ ದೊಡ್ಡ ರಾಯಭಾರಿಗಳು ಆದಂತೆ ಎಂದರು.ನಮ್ಮ ಮೈಸೂರು ಸ್ಯಾಂಡಲ್ ಸೋಪಿನ ರಾಯಭಾರಿಯಾಗಿ ಯಾರನ್ನೂ ಆಯ್ಕೆ ಮಾಡುವುದು ಬೇಡ. ಅದರಲ್ಲಿಯೂ ಕನ್ನಡದವರು ಹೊರತಾಗಿ ತಮಿಳು, ತೆಲುಗಿನವರು ಯಾರು ಬೇಡ. ಕರ್ನಾಟಕದ ಶ್ರೀಗಂಧ ದಸರಾ ನಡೆಯುವ ಮೈಸೂರು ಪ್ರಪಂಚದಲ್ಲೇ ಬ್ರಾಂಡ್ ಆಗಿವೆ.ಎಲ್ಲರೂ ನಮ್ಮ ಮೈಸೂರು ಸ್ಯಾಂಡಲ್ ಸೋಪ್ ಬಳಸಿ ನಾನೇ ಫ್ರೀಯಾಗಿ ರಾಯಭಾರಿ ಆಗ್ತೀನಿ ಎಂದು ಕನ್ನಡಪರ ಹೋರಾಟಗಾರ ಹಾಗೂ ವಾಟಾಳ್ ಪಕ್ಷದ ಸಂಸ್ಥಾಪಕ ವಾಟಾಳ್ ನಾಗರಾಜ್ ಆಗ್ರಹಿಸಿದ್ದರು.

ತಮನ್ನಾಗಿ 6 ಕೋಟಿ ಕೊಟ್ಟಿರೋದರಲ್ಲಿ ದೊಡ್ಡ ರಾಜಕೀಯ ಇದೆ. ಸಿಕ್ಕಸಿಕ್ಕವರಿಗೆ ಕೋಟಿ ಕೋಟಿ ಕೊಟ್ರೆ ನಾಳೆ ಕಾರ್ಖಾನೆ ಮುಚ್ಚಬೇಕಾಗುತ್ತದೆ. ಮೈಸೂರು ಸ್ಯಾಂಡಲ್ ಸೋಪ್ ಕನ್ನಡಿಗರ ಸೋಪ್ ಎಲ್ಲರೂ ಸ್ಯಾಂಡಲ್ ಸೋಪ್ ಬಳಸಿ, ನಾನೇ ಫ್ರೀಯಾಗಿ ರಾಯಭಾರಿ ಆಗುತ್ತೇನೆ ಎಂದು ಆಗ್ರಹಿಸಿದರು.

