ಹಾಸನ : ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಸಿಗದೇ ಜೈಲು ಪಾಲಾಗಿದ್ದಾರೆ. ಇಂದು ಪ್ರಜ್ವಲ್ ನ ಕಾರ್ ಡ್ರೈವರ್ ಕಾರ್ತಿಕ್ ಅವರ ವಿಚಾರಣೆ ಕೋರ್ಟ್ನ ನಲ್ಲಿ ನಡೆದಿದ್ದು ಕೋರ್ಟ್ ಮುಂದೆ ಸ್ಫೋಟಕ ಮಾಹಿತಿಯನ್ನು ನುಡಿದಿದ್ದಾರೆ.

ಪ್ರಜ್ವಲ್ ರೇವಣ್ಣ ಅವರ ಮೊಬೈಲ್ ನಲ್ಲಿ 2000 ಅಶ್ಲೀಲ ಫೋಟೋಗಳು, 40 ರಿಂದ 50 ವಿಡಿಯೋಗಳಿದ್ದವು ಎಂದು ಡ್ರೈವರ್ ಕಾರ್ತಿಕ್ ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಸಾಕ್ಷ್ಯ ನುಡಿದಿದ್ದಾರೆ. ಅಲ್ಲದೇ ಮೊಬೈಲ್ ನಲ್ಲಿದ್ದ ಅಶ್ಲೀಲ ವಿಡಿಯೋಗಳು ಹೇಗೆ ಸಿಕ್ಕವು ಎನ್ನುವ ಬಗ್ಗೆ ಕೂಡ ಕೋರ್ಟ್ ಮುಂದೆ ಹೇಳಿದ್ದಾರೆ.
2018ರಿಂದ ನಾನು ಪ್ರಜ್ವಲ್ ರೇವಣ್ಣ ಅವರ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದೆ. ಅದಕ್ಕಿಂತ ಮೊದಲು 2009 ರಲ್ಲಿ ರೇವಣ್ಣ,ಭಾವನಿ ಮೇಡಂ ಹಾಗೂ ಸೂರಜ್ ರೇವಣ್ಣ ಅವರ ಕಾರು ಚಾಲಕನಾಗಿ ಕೆಲಸ ಮಾಡಿದ್ದೇನೆ.ಆ ಸಂದರ್ಭದಲ್ಲಿ ಕ್ಷೇತ್ರ ಸಂಚಾರ ಮಾಡುತ್ತಿದ್ದಾಗ ಪ್ರಜ್ವಲ್ ರೇವಣ್ಣ ಕಾರಿನಲ್ಲೇ ಕುಳಿತು ಮೊಬೈಲ್ ನಲ್ಲಿ ಅಶ್ಲೀಲ ದೃಶ್ಯ ವೀಕ್ಷಿಸುತ್ತಿದ್ದರು. ನಾನು ಅವರ ಕಡೆ ನೋಡಿದಾಗ ಫೋನ್ ತಿರುಗಿಸಿಕೊಳ್ಳುತ್ತಿದ್ದರು ಎಂದು ಕೊರ್ಟ್ ಮುಂದೆ ಸಾಕ್ಷ್ಯ ನುಡಿದಿದ್ದಾರೆ
ಒಂದು ದಿನ ಪ್ರಜ್ವಲ್ ರೇವಣ್ಣ ಅವರು ಜಯನಗರದ ಅವರ ಗೆಳತಿ ಮನೆಗೆ ಹೋದಾಗ ಕಾರಿನಲ್ಲಿ ಮೊಬೈಲ್ ಬಿಟ್ಟಿದ್ದರು.ಅಲ್ಲದೆ ಪ್ರಜ್ವಲ್ ರೇವಣ್ಣರವರ ಪಾಸ್ ವರ್ಡ ನನಗೆ ಮೊದಲೇ ಗೊತ್ತಿತ್ತು ಮೊಬೈಲ್ ತೆಗೆದು ನೋಡಿದಾಗ ಸಾವಿರಾರು ಅಶ್ಲೀಲ ಫೋಟೋ, ವಿಡಿಯೋಗಳಿದ್ದವು. ಭವಾನಿ ರೇವಣ್ಣರಿಗೆ ತೋರಿಸಲೆಂದು ವಿಡಿಯೋಗಳನ್ನು ನನ್ನ ಮೊಬೈಲ್ ಗೆ ವರ್ಗಾಯಿಸಿಕೊಂಡೆ. ಮಗನಿಗೆ ಬುದ್ದಿ ಹೇಳಲಿ ಎಂದು ಭವಾನಿ ರೇವಣ್ಣರಿಗೆ ಮಾಹಿತಿ ನೀಡಿದ್ದೆ.

ಆಗ ಭವಾನಿ ರೇವಣ್ಣ ಅವರು ಫೋಟೋ, ವಿಡಿಯೋ ತಮಗೆ ಕಳುಹಿಸಲು ಕೋರಿದ್ದರು. ಅಲ್ಲದೇ ಬೇರೆಲ್ಲೂ ಈ ವಿಷಯ ಬಹಿರಂಗಪಡಿಸದಂತೆ ಮನವಿ ಮಾಡಿದ್ದರು.ಈ ವಿಷಯ ಗೊತ್ತಾದ ಬಳಿಕ ಭವಾನಿ ರೇವಣ್ಣ ಪ್ರಜ್ವಲ್ ಜೊತೆ ಮಾತು ಬಿಟ್ಟಿದ್ದರು.ವಿಡಿಯೋ ಬಗ್ಗೆ ತಿಳಿಸಿದ್ದು ಯಾರೆಂದು ಕೇಳಿದಾಗ ಭವಾನಿ ನನ್ನ ಹೆಸರು ಹೇಳಿದ್ದರು. ಆಗ ಫೋನ್ ಮಾಡಿ ಪ್ರಜ್ವಲ್ ತನಗೆ ಬೈದಿದ್ದಾರೆ ಆ ಕಾರಣದಿಂದ ನಾನು 2022ರಲ್ಲಿ ನಾನು ಕೆಲಸ ಬಿಟ್ಟೆ. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಕೇಸ್ ಕೂಡಾ ಹಾಕಿದ್ದೆ.ಆಸ್ತಿ ವಿವಾದ ಬಗೆಹರಿಸುತ್ತೇನೆ ಕೆಲಸಕ್ಕೆ ಬರುವಂತೆ ಕರೆದಿದ್ದರು. ಆದರೆ ವಿಡಿಯೋ ಬಹಿರಂಗಪಡಿಸದಂತೆ ತಡೆಯಾಜ್ಞೆ ತಂದರು. ನನ್ನನ್ನು ಪ್ರತಿವಾದಿ ಮಾಡಿದ್ದರಿಂದ ವಕೀಲ ದೇವರಾಜೇಗೌಡರನ್ನು ಸಂಪರ್ಕಿಸಿದೆ. ಸಾಕ್ಷಿಯಾಗಿ ಫೋಟೋಗಳನ್ನು ನೀಡುವಂತೆ ಸೂಚಿಸಿದ್ದರಿಂದ ಪೆನ್ ಡ್ರೈವ್ ನಲ್ಲಿ ನೀಡಿದೆ. ಆದ್ರೆ, ಚುನಾವಣೆ ವೇಳೆ ಫೋಟೋ, ವಿಡಿಯೋಗಳು ಬಹಿರಂಗಗೊಂಡವು ಎಂದು ಕಾರ್ತಿಕ್, ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಸಾಕ್ಷ್ಯ ನುಡಿದಿದ್ದಾರೆ.

