ಬೆಂಗಳೂರು : ಕನ್ನಡ ಕಿರುತೆರೆ ನಟ ಶ್ರೀಧರ್ ನಾಯಕ್ ಅವರು ನಿನ್ನೆ ರಾತ್ರಿ ನಿಧನರಾಗಿದ್ದಾರೆ.ಅವರಿಗೆ 47 ವರ್ಷ ವಯಸ್ಸಾಗಿತ್ತು. ಶ್ರೀಧರ್ ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು.ಇತ್ತೀಚೆಗೆ ತೀವ್ರ ಅನಾರೋಗ್ಯ ಕಾಡಿತ್ತು. ಅರ್ಥಿಕವಾಗಿ ತುಂಬಾ ಕಷ್ಟದಲ್ಲಿದ್ದ ಅವರು ದಿನಕ್ಕೆ 10 ರಿಂದ 15 ಸಾವಿರ ರೂ ವೈದ್ಯಕೀಯ ಖರ್ಚು ಅಗುತ್ತಿದ್ದು ವೈದ್ಯಕೀಯ ಚಿಕಿತ್ಸೆ ವೆಚ್ಚವನ್ನು ಭರಿಸಲು ಕೂಡಾ ಅವರಿಂದ ಸಾಧ್ಯವಾಗುತ್ತಿರಲಿಲ್ಲ ಅಲ್ಲದೆ ಕೆಲವು ತಿಂಗಳಿನಿಂದ ಮನೆ ಬಾಡಿಗೆ ಕಟ್ಟಲಾಗದ ಪರಿಸ್ಥಿತಿಯಲ್ಲಿದ್ದರು ಹಾಗೂ ಊಟಕ್ಕೂ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಗುರುತೇ ಸಿಗದಷ್ಟು ಸೊರಗಿ ಹೋಗಿದ್ದ ಶ್ರೀಧರ್ ನಾಯಕ್ ಬೆಡ್ ಮೇಲೆ ಮಲಗಿದ್ದು ನೋಡಿ ಹಲವರಿಗೆ ಶಾಕ್ ಆಗಿತ್ತು. ಸಹಾಯ ಮಾಡುವಂತೆ ಅನೇಕರನ್ನು ಕೋರಿಕೊಂಡಿದ್ದರು

ಬೆಂಗಳೂರಿನ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅವರ ಮೃತ ಶರೀರವನ್ನು ಇಡಲಾಗಿದೆ.”ಪಾರು’ ಮತ್ತು ‘ವಧು’ ಧಾರಾವಾಹಿಗಳಲ್ಲಿ ಅವರ ಪಾತ್ರಗಳು ಜನಪ್ರಿಯವಾಗಿದ್ದವು.ಅಲ್ಲದೆ ಸುದೀಪ್ ಅಭಿನಯದ “ಮ್ಯಾಕ್ಸ್ “ಚಲನಚಿತ್ರದಲ್ಲಿ ನಟಿಸಿದ್ದರು.ಅವರ ಅಕಾಲಿಕ ನಿಧನವು ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ


