ಬಂಟ್ವಾಳ:ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿ ಇರಾಕೋಡಿ ಎಂಬಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

ಕೊಳತ್ತಮಜಲು ನಿವಾಸಿ ಪಿಕಪ್ ಮಾಲೀಕ ರಹೀಂ ಮತ್ತು ಸಹಾಯಕ ಶಾಫಿ ಎಂಬವರ ಮೇಲೆ ಅಪರಿಚಿತ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿದೆ ಎಂದು ತಿಳಿದುಬಂದಿದೆ. ಹಲ್ಲೆಗೀಡಾದ ರಹೀಂ ಸಾವನ್ನಪ್ಪಿದ್ದು ಶಾಫಿ ಅವರ ಸ್ಥಿತಿ ಕೂಡ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಗಾಯಾಳುಗಳನ್ನು ಬಂಟ್ವಾಳ ಆಸ್ಪತ್ರೆಗೆ ರವಾನಿಸಲಾಗಿದೆ.
ಪಿಕಪ್ ಮಾಲೀಕ ರಹೀಂ ಇರಾಕೋಡಿ ಎಂಬಲ್ಲಿ ಮನೆಯೊಂದರ ಬಳಿ ಮರಳು ಅನ್’ಲೋಡ್ ಮಾಡಿ ವಾಪಾಸಾಗುವ ಸಮಯದಲ್ಲಿ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ತಲ್ವಾರ್ ನಿಂದ ದಾಳಿ ನಡೆಸಿರುವುದಾಗಿ ತಿಳಿದುಬಂದಿದೆ.
ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

