ಮಂಗಳೂರು, ಮೇ 27: ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ಮಂಗಳೂರು ಬಂದ್ಗೆ ಕರೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಅವರನ್ನು ಕದ್ರಿ ಪೊಲೀಸರು ಇಂದು ರಾತ್ರಿ ಬಂಧಿಸಿದ್ದಾರೆ.
ಬಂಧನದ ಸುದ್ದಿ ಹರಡುತ್ತಿದ್ದಂತೆ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಸಂಘಟನೆಗಳ ಕಾರ್ಯಕರ್ತರು ಕದ್ರಿ ಪೊಲೀಸ್ ಠಾಣೆಯ ಹೊರಗೆ ಜಮಾಯಿಸಿದರು.
ಡಿಸಿಪಿ ರವಿಶಂಕರ್ ಪೊಲೀಸ್ ಠಾಣೆಗೆ ಭೇಟಿ ನೀಡಿ, ನಿಷೇಧಾಜ್ಞೆ ಜಾರಿಯಲ್ಲಿದ್ದ ಕಾರಣ, ಜನಸಮೂಹವನ್ನು ಠಾಣೆಯ ಆವರಣದಿಂದ ಪೊಲೀಸರು ಚದುರಿಸಿದರು. ನಂತರ ಶರಣ್ ಪಂಪ್ವೆಲ್ನನ್ನು ಪೊಲೀಸರು ವೈದ್ಯಕೀಯ ಪರೀಕ್ಷೆಗಾಗಿ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ದರು.

