ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಯತೀಶ್ ಎನ್. ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಮಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಈ ಹಿಂದೆ ದ.ಕ ಜಿಲ್ಲಾ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕರಿಸಲಿದ್ದಾರೆ.

ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಅನುಪಮ್ ಅಗರ್ವಾಲ್ ಅವರನ್ನು ಆರ್ಥಿಕ ಅಪರಾಧಗಳ ಉಪ ಪೊಲೀಸ್ ಮಹಾನಿರ್ದೇಶಕ ಹುದ್ದೆಗೆ ವರ್ಗಾಯಿಸಲಾಗಿದೆ.

ಈ ಮಧ್ಯೆ ಯತೀಶ್ ಅವರಿಗೆ ಯಾವುದೇ ಹುದ್ದೆ ನೀಡಿಲ್ಲ.
ಉಡುಪಿ ಎಸ್ಪಿಯಾಗಿ ಡಾ. ಅರುಣ್ ಕೆ ಅವರನ್ನು ವರ್ಗಾವಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ಎಸ್ಪಿ ನೇಮಿಸಲಾಗಿದೆ.
ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹರಿರಾಮ್ ಶಂಕರ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

