ಮುಂಬೈ :IPL ಲೀಗ್ನ ಮೊದಲ ಕ್ವಾಲಿಫೈಯರ್ನಲ್ಲಿ ಜಯ ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಫೈನಲ್ ಗೆ ಪ್ರವೇಶಿಸಿದೆ . ಇಂದು ದ್ವಿತೀಯ ಕ್ವಾಲಿಫೈಯರ್ ಅರ್ಹತೆಗಾಗಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ಇಂದು ಮುಖಾಮುಖಿಯಾಗಲಿದೆ.

ಈ ಪಂದ್ಯದಲ್ಲಿ ಗೆದ್ದ ತಂಡ ನಿನ್ನೆ ಸೋತ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಇಂದು ಚಂಡೀಗಢದ ನ್ಯೂ ಪಿಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದ್ದು ನಿರ್ಣಾಯಕವಾಗಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್ಗೆ ಪ್ರವೇಶಿಸಲ್ಲ ಎಂಬುದು ವಿಶೇಷ.
ಇಂದಿನ ಪಂದ್ಯದಲ್ಲಿ ಜಯಗಳಿಸುವ ತಂಡವು ದ್ವಿತೀಯ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆಯಲಿದೆ. ಇನ್ನು ಸೋತ ತಂಡ ಟೂರ್ನಿಯಿಂದ ಹೊರಬೀಳಲಿದೆ. ಹೀಗಾಗಿ ಇಂದಿನ ಪಂದ್ಯವು ಉಭಯ ತಂಡಗಳ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ.

ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಈವರೆಗೆ 7 ಬಾರಿ ಮುಖಾಮುಖಿಯಾಗಿವೆ. ಈ ವೇಳೆ 5 ಪಂದ್ಯಗಳಲ್ಲಿ ಗುಜರಾತ್ ಟೈಟಾನ್ಸ್ ತಂಡ ಗೆಲುವು ದಾಖಲಿಸಿದೆ. ಇನ್ನು 2 ಬಾರಿ ಮಾತ್ರ ಮುಂಬೈ ಇಂಡಿಯನ್ಸ್ ತಂಡ ಜಯ ಸಾಧಿಸಿದೆ.

