ಮಂಗಳೂರು : ಮಂಗಳೂರಿನ ನೂತನ ಪೊಲೀಸ್ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿಯವರು ಇಂದು ಅಧಿಕಾರ ಸ್ವೀಕರಿಸಿದರು. ಈ ಹಿಂದಿನ ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ಅವರು ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸುಧೀರ್ ಕುಮಾರ್ ರೆಡ್ಡಿಯವರಿಗೆ ಅಧಿಕಾರ ಹಸ್ತಾಂತರಿಸಿದರು

ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಅನುಪಮ್ ಅಗರ್ವಾಲ್ ಅವರನ್ನು ಆರ್ಥಿಕ ಅಪರಾಧಗಳ ಉಪ ಪೊಲೀಸ್ ಮಹಾನಿರ್ದೇಶಕ ಹುದ್ದೆಗೆ ವರ್ಗಾಯಿಸಲಾಗಿದೆ.


