ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಗಿಲನ್ ಅವರನ್ನು ವರ್ಗಾವಣೆ ಮಾಡಲಾಗಿದ್ದು ಅವರಿಂದ ತೆರವಾದ ಸ್ಥಾನಕ್ಕೆ ಬೆಂಗಳೂರು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತ ದರ್ಶನ್ ಎಚ್ ವಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.

ಮುಲ್ಲೈ ಮುಗಿಲನ್ ಅವರನ್ನು ಜನರಲ್ ಆಫ್ ರಿಜಿಸ್ಟ್ರೇಷನ್ ಆಂಡ್ ಸ್ಟಾಂಪ್ಸ್ ಆಯುಕ್ತರಾಗಿ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿರುವ ದರ್ಶನ್ ಎಚ್.ವಿ ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತರಾಗಿದ್ದರು.

