ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ವಿದ್ಯಾಕುಮಾರಿಯನ್ನು ವರ್ಗಾವಣೆ ಮಾಡಿ ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ

ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ವಿದ್ಯಾಕುಮಾರಿ ಯವರಿಗೆ ಸ್ಥಳ ನಿಯುಕ್ತಿಗೊಳಿಸದೇ ವರ್ಗಾವಣೆ ಮಾಡಲಾಗಿದೆ.ಸ್ವರೂಪ ಟಿ.ಕೆ. ಈ ಹಿಂದೆ ಬೆಂಗಳೂರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ- ಗವರ್ನೆನ್ಸ್ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

