ಮಂಗಳೂರು : ಸ್ಯಾಂಡಿಸ್ ಕಂಪನಿ ಅರ್ಪಿಸುವ ಸಿನಿ ಗ್ಯಾಲಕ್ಸಿ ಕೋಸ್ಟಲ್ ಫಿಲ್ಮ ಅವಾರ್ಡ್ಸ್ 2025ನೇ ನಾಲ್ಕನೇ ಆವೃತ್ತಿಯು ಜೂನ್ 22 ರಂದು ಭಾನುವಾರ ಸಂಜೆ 3:00ಗೆ ಸರಿಯಾಗಿ ಮುಲ್ಕಿಯ ಸುಂದರರಾಮ ಶೆಟ್ಟಿ ಕನ್ವೆನ್ಷನಲ್ ಸೆಂಟರ್ ಕೋಲ್ನಾಡ್ ಇಲ್ಲಿ ಬಹಳ ಅದ್ದೂರಿಯಾಗಿ ಕಾರ್ಯಕ್ರಮ ನಡೆಯಲಿದೆ ಎಂದು ಕಾರ್ಯಕ್ರಮದ ಆಯೋಜಕರಾದ ಸಂದೇಶ್ ರಾಜ್ ಬಂಗೇರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಈ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕರಾದ ಗುರುಕಿರಣ್ ಹಾಗೂ ಸ್ಯಾಂಡಲ್ ವುಡ್ ತಾರೆಯರಾದ ರಚನಾ ರೈ, ವೃಂದ ಆಚಾರ್ಯ, ರೂಪೇಶ್ ಶೆಟ್ಟಿ, ಪೃಥ್ವಿ ಅಂಬರ್ ಹಾಗೂ ನಟಿ ಸೋನಲ್ ಮೊಂತೆರೋ ಮತ್ತು ತುಳು ಚಿತ್ರರಂಗದ ನಿರ್ಮಾಪಕರು, ತಂತ್ರಜ್ಞರು,ಹಿರಿಯ ಮತ್ತು ಕಿರಿಯ ನಟ ನಟಿಯರು ಮತ್ತು ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಈ ವರ್ಣರಂಜಿತ ಕಾರ್ಯಕ್ರಮದ ಆಕರ್ಷಣೆಯಾಗಿ ತುಳು ಚಿತ್ರರಂಗದ ನಟ ನಟಿಯರಿಂದ, ಮತ್ತು ಸಿಸಿಲಿಂಗ್ ಗಾಯ್ಸ್ ತಂಡದಿಂದ ನೃತ್ಯ,ರಸಮಂಜರಿ ಹಾಗೂ ಕಾಮಿಡಿ ಕಾರ್ಯಕ್ರಮ ನಡೆಯಲಿದೆ. ಕರಾವಳಿಯ ಪ್ರಸಿದ್ದ ಕಾರ್ಯಕ್ರಮ ನಿರೂಪಕರಾದ ಶರ್ಮಿಳಾ ಅಮೀನ್ ಮತ್ತು ನಟ ವಿನೀತ್ ಕುಮಾರ್ ಕಾರ್ಯಕ್ರಮ ನಿರೂಪಣೆ ಮಾಡಲಿದ್ದಾರೆ.

ಅಲ್ಲದೆ ತುಳು ರಂಗಭೂಮಿ ಮತ್ತು ತುಳು ಚಿತ್ರರಂಗದಲ್ಲಿ ಎರಡರಲ್ಲೂ ಸಾಧನೆಗೈದ ಇಬ್ಬರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಈ ಬಾರಿ 2024ರಲ್ಲಿ ಸೆನ್ಸಾರ್ ಅಗಿ ತೆರೆಕಂಡಿರುವ ಒಟ್ಟು 8 ಸಿನಿಮಾಗಳು ಸ್ಪರ್ಧೆಯಲ್ಲಿವೆ ಹಾಗೂ ಒಟ್ಟು 30 ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ.
ಲೈಫ್ ಟೈಮ್ ಅಚೀವೆಂಟ್ ಅವಾರ್ಡ್ಸ್ನ್ನು ಹಿರಿಯ ಕಲಾವಿದೆ ಶ್ರೀಮತಿ ರೋಹಿಣಿ ಜಗರಾಂ ಹಾಗೂ ವರ್ಸಟೈಲ್ ಆಕ್ಟರ್ ಅವಾರ್ಡ್ ನ್ನು ಕಲಾವಿದ ಪ್ರಕಾಶ್ ತೂಮಿನಾಡು ಅವರಿಗೆ ನೀಡಿ ಗೌರವಿಸಲಿದ್ದೇವೆ. ಕಾರ್ಯಕ್ರಮಕ್ಕೆ ಉಚಿತ ಪ್ರವೇಶವಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸಂದೇಶ್ ರಾಜ್ ಕೋರಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಉದಯ ಬಳ್ಳಾಲ್,ನಟ ವಿನೀತ್,ಪ್ರೀತಂ ,ಯಶ್ ರಾಜ್,ಸಾತ್ವಿಕ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

