ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಕೆಲವು ಅಹಿತಕರ ಘಟನೆಗಳ ವಾಸ್ತವ ಮತ್ತು ನೈಜತೆಯ ವರದಿ ಪಡೆಯಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಕಳುಹಿಸಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ಸೈಯದ್ ನಾಸೀರ್ ಹುಸೇನ್ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಮಂಜುನಾಥ ಭಂಡಾರಿ ರವರ ನೇತೃತ್ವದ ನಿಯೋಗವು ಮೂರು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಸ್ತವ್ಯ ಹೂಡಿ ಎಲ್ಲಾ ಧರ್ಮ, ಸಮುದಾಯದ ಮುಖಂಡರುಗಳನ್ನ ಭೇಟಿ ಮಾಡಿ ವರದಿಯನ್ನು ತಯಾರಿಸಿ ಅದನ್ನು ಇಂದು ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಸನ್ಯಾನ್ಯ ಶ್ರೀ ಡಿ.ಕೆ.ಶಿವಕುಮಾರ್ ಅವರಿಗೆ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷರಾದ ಶ್ರೀ ವಿ. ಆರ್ ಸುದರ್ಶನ್ , ಮಾಜಿ ಸಚಿವರಾದ ಶ್ರೀ ಕಿಮ್ಮನೆ ರತ್ನಾಕರ್ , ಮಾಜಿ ಸಂಸದರಾದ ಶ್ರೀ ಜಯಪ್ರಕಾಶ್ ಹೆಗ್ಡೆ ರವರು ಉಪಸ್ಥಿತರಿದ್ದರು.

