ಮಂಗಳೂರು : ಫಳ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮತ್ತು ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ಮಾಡಿರುವ ಸಾಧನೆ ಮಾಡಿದ್ದಾರೆಎಂದು ಲ|ಎ.ಚಂದ್ರಹಾಸ ಶೆಟ್ಟಿಯವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ತಮಿಳುನಾಡಿನ ಹರಿಣಿತ ಬಿ.ಎಸ್. ಇವರ ಹೆಸರಿನಲ್ಲಿ ಇದ್ದ 15 ನಿಮಿಷದ ಕಪೋತಾಸನದ ದಾಖಲೆಯನ್ನು ಮುರಿದು ಒಂದು ಗಂಟೆ ಎರಡು ನಿಮಿಷದ ಅವಧಿಗೆ ಸಾಧಿಸಿ ಈ ದಾಖಲೆಯನ್ನು ಕುಮಾರಿ ಶರಣ್ಯ ಶರತ್ ತನ್ನದಾಗಿಸಿಕೊಂಡಿದ್ದಾರೆ ಎಂದು ಹೇಳಿದರು.

ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಸಾಧನೆ ಮಾಡಿರುವ ಅಂತಾರಾಷ್ಟ್ರೀಯ ಯೋಗಪಟು ಕವಿತಾ ಅಶೋಕ್ ಈಕೆಗೆ ಅತಿ ಚಿಕ್ಕ ವಯಸ್ಸಿನಿಂದಲೇ ತರಬೇತಿಯನ್ನು ಕೊಡುತ್ತಿದ್ದಾರೆ.ಮತ್ತು ಬೆನ್ನೆಲುಬಾಗಿ ಸಹಕರಿಸುತ್ತಿರುವ ಶಾಲೆಯ ಪ್ರಾಂಶುಪಾಲರಾದ ಸಿಸ್ಟರ್ ಮೇಝಿ ಎ.ಸಿ., ಶಿಕ್ಷಕಿ ವಿನುತಾ ಪ್ರವೀಣ್, ಮಂಗಳೂರು ಮಹಾನಗರ ಪಾಲಿಕೆಯ ಈಜುಕೊಳದ ವ್ಯವಸ್ಥಾಪಕರಾದ ಶ್ರೀ ರಮೇಶ್ ಬಿಜೈ ಮತ್ತು ಈಜಿನಲ್ಲಿ ಈ ಹಿಂದೆ ದಾಖಲೆ ಮಾಡಿರುವ ಚಂದ್ರಶೇಖರ್ ಸೂರಿಕುಮೇರಿ ಇವರನ್ನು ಈ ಸಂದರ್ಭದಲ್ಲಿ ಸ್ಮರಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ರಮೇಶ್ ಬಿಜೈ, ಚಂದ್ರಶೇಖರ್ ರೈ, ಸಿಸ್ಟರ್ ಸೆಲಿನ್ವಿರ, ಉಪ ಪ್ರಾಂಶುಪಾಲರಾದ ಸಿಸ್ಟರ್ ಸಂತೋಷ್ ಮೇರಿ, ಸೋನಿಯಾ ಜೆ, ಶರಣ್ಯ ಶರತ್, ಯೋಗ ಶಿಕ್ಷಕಿ ಕವಿತಾ ಅಶೋಕ್ ಉಪಸ್ಥಿತರಿದ್ದರು.


