ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು ನಿರಂತರ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75 ರ ಮಾರನಹಳ್ಳಿ ಬಳಿ ಭೂಕುಸಿತ ಸಂಭವಿಸಿದ ಕಾರಣ, ಜಿಲ್ಲಾಡಳಿತವು ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಿದೆ.
ಮಂಗಳೂರು ಕಡೆಗೆ ತೆರಳುವ ವಾಹನಗಳಿಗೆ ಬೆಂಗಳೂರು-ಹಾಸನ-ಬೇಲೂರು-ಚಾರ್ಮಾಡಿ ಘಾಟ್ ಬಳಸುವಂತೆ ಸೂಚನೆ ನೀಡಲಾಗಿದೆ. ಮಂಗಳೂರು ಕಡೆಯಿಂದ ಬರುವ ವಾಹನ ಸವಾರರು ಕೊಡಗಿನ ಸಂಪಾಜೆ ಮಾರ್ಗದಲ್ಲಿ ಸಂಚರಿಸಲು ಸೂಚನೆ ನೀಡಿ ಹಾಸನ ಡಿಸಿ ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.
ಭೂಕುಸಿತ ಸಂಭವಿಸಿದ ಕಾರಣ ಶಿರಾಡಿ ಘಾಟ್ ಮಾರ್ಗದಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿದೆ

