ಬಳ್ಳಾರಿ: ಡಿಸೆಂಬರ್ನಲ್ಲಿ ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ 2025ರ ಅಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಆಯ್ಕೆಯಾಗಿದ್ದಾರೆ. ನಗರದ ಖಾಸಗಿ ಹೋಟೆಲ್ನಲ್ಲಿ ಭಾನುವಾರ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಕಸಾಪದ ರಾಜ್ಯಾಧ್ಯಕ್ಷ ನಾಡೋಜ ಮಹೇಶ ಜೋಶಿ ಅವರು ತಿಳಿಸಿದರು.

ಬಳ್ಳಾರಿಯ ಖಾಸಗಿ ಹೋಟೆಲ್ನಲ್ಲಿ ನಡೆದ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಇದೇ ವೇಳೆ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ, ಅನುವಾದಕಿ ದೀಪ ಭಾಸ್ತಿ ಅವರನ್ನು ಸಮ್ಮೇಳನದಲ್ಲಿ ಗೌರವಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಮೂಲತಃ ಹಾಸನ ಜಿಲ್ಲೆಯವರಾದ ಬಾನು ಮುಷ್ತಾಕ್
ಇತ್ತೀಚೆಗೆ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಗೆ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಲಭಿಸಿತ್ತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡ ಕಂಪು ಪಸರಿಸಿರುವ ಬಾನು ಮಷ್ತಾಕ್ ಅವರಿಗೆ ಇದೀಗ ಮತ್ತೊಂದು ಗೌರವ ದೊರೆತಂತಾಗಿದೆ.

