ಕಡಬ : ತಮಿಳುನಾಡಿನ ಮಾಜಿ ಬಿಜೆಪಿ ಅಧ್ಯಕ್ಷ ನಿವೃತ್ತ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಕುಟುಂಬ ಸಮೇತರಾಗಿ ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು
ಕ್ಷೇತ್ರದಲ್ಲಿ ಆಶ್ಲೇಷ ಬಲಿ ಸೇವೆ ನೆರವೇರಿಸಿದ ನಂತರ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.ಸ್ವಾಮೀಜಿಯವರು ಅಣ್ಣಾಮಲೈ ದಂಪತಿಗಳಿಗೆ ಶಾಲು ಹೊದಿಸಿ ಫಲ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.

ನಂತರ ಮಾತನಾಡಿದ ಅಣ್ಣಾಮಲೈ ಕಳೆದ ಹತ್ತು ಹದಿನೈದು ವರ್ಷಗಳಿಂದ ಶ್ರೀ ಕ್ಷೇತ್ರಕ್ಕೆ ಬರುತ್ತಿದ್ದೇನೆ. ಇದರಿಂದ ನನಗೆ ನೆಮ್ಮದಿ ಪ್ರಾಪ್ತವಾಗಿದೆ. ತಮಿಳುನಾಡಿನ ಜನ,ಕರ್ನಾಟಕದ ಜನ ಹಾಗೂ ಇಡೀ ಭಾರತದ ಜನರು ಸುಖ ಶಾಂತಿ ನೆಮ್ಮದಿಯಾಗಿರಬೇಕು ಎಂದು ಆಶ್ಲೇಷ ನಕ್ಷತ್ರದ ಈ ಪುಣ್ಯದಿನ ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಲ್ಲರಿಗೂ ಒಳ್ಳೆದಾಗಲಿ ಎಂದರು.


