ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಮುಸ್ಲಿಂ ಮಹಿಳೆಯೊಬ್ಬರು ತನ್ನ ಗಂಡ ,ಅತ್ತೆ ಹಾಗು ಮಾವನ ವಿರುದ್ಧ ಪೋಲಿಸರಿಗೆ ದೂರು ನೀಡಿದ್ದಾರೆ.
ಸಂತ್ರಸ್ತೆಯು 2021ರಲ್ಲಿ ಆರೋಪಿ ಯೂನಸ್ ಪಾಷಾನನ್ನು ವಿವಾಹವಾಗಿದ್ದರು.ಮದುವೆಯಾದ 4 ತಿಂಗಳ ನಂತರ ಪತಿ ಯೂನಸ್ ಪಾಷಾ, ಆತನ ತಂದೆ ಚಿಂದ್ ಪಾಷಾ ಮತ್ತು ತಾಯಿ ಪಹೀನ್ ತಾಜ್ ಸೇರಿಕೊಂಡು ಸಂತ್ರಸ್ತೆಗೆ ಚಿತ್ರಹಿಂಸೆ ನೀಡಲು ಆರಂಭಿಸಿದ್ದಾರೆ ಅಲ್ಲದೆ ಪತಿಯು ತನ್ನ ಪರಿಚಯದ ಸ್ಥಳೀಯ ರಾಜಕಾರಣಿಗಳು ಹಾಗು ಪುಡಿರೌಡಿಗಳ ಜೊತೆಗೆ ಮಲಗುವಂತೆ ಒತ್ತಾಯಿಸುತ್ತಿದ್ದುದಲ್ಲದೆ 6 ಬಾರಿ ತಲಾಖ್ ಕೂಡಾ ನೀಡಿದ್ದಾನೆ.ಈ ಮಧ್ಯೆ ಸಂತ್ರಸ್ತೆಯು ಗರ್ಭವತಿಯಾಗಿದ್ದು, ಯೂನಸ್ ಪಾಷಾ ಆಕೆಯ ಹೊಟ್ಟೆಯ ಮೇಲೆ ಒದ್ದು ಹಲ್ಲೆ ಮಾಡಿದ್ದ.ಅಲ್ಲದೆ ತಲೆ ಮೇಲೆ ಗನ್ ಇಟ್ಡು ಕೊಲೆ ಮಾಡುವುದಾಗಿ ಹೇಳಿದ್ದಾನೆ ಸಂತ್ರಸ್ತೆಯನ್ನು ಹೆದರಿಸಿ ಮತ್ತು ಒತ್ತಾಯಪಡಿಸಿ ಗರ್ಭಪಾತ ಮಾಡಿಸಿದ್ದಾನೆ ಯೂನಸ್ ಪಾಷಾಗೆ ರಾಜಕಾರಣಿಗಳು, ಸ್ಥಳೀಯ ರೌಡಿಗಳ ನಂಟು ಇದೆ.

ಆರೋಪಿಯು ಸಂತ್ರಸ್ತೆಯನ್ನು ಆತನ ರಾಜಕಾರಣಿ ಸ್ನೇಹಿತನಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾನೆ ಎಂಬುದು ಕೆಲವು ತಿಂಗಳ ಹಿಂದೆ ತಿಳಿದು ಬಂದಿದೆ. ಇದರಿಂದ ಭಯಗೊಂಡ ಸಂತ್ರಸ್ತೆಯು ಕಳೆದ ಎರಡು ತಿಂಗಳುಗಳಿಂದ ಗಂಡನ ಮನೆ ಬಿಟ್ಟು ಬಂದು ತಾಯಿ ಮನೆಯಲ್ಲಿ ವಾಸವಿದ್ದಾರೆ ಎಂದು ಎಫ್ಐಆರ್ ನಲ್ಲಿ ಉಲ್ಲೇಖಿಸಲಾಗಿದೆ.
ಜೂನ್ 4 ರಂದು ಸಂತ್ರಸ್ತೆಯು ತನ್ನ ಬಟ್ಟೆಗಳನ್ನು ವಾಪಸ್ ತರಲು ಪತಿಯ ಮನೆಗೆ ಹೋಗಿದ್ದಾಗ ಪತಿಯು ಕೊಲೆ ಬೆದರಿಕೆ ಹಾಕಿದ್ದಾನೆ. ಸಂತ್ರಸ್ತೆಗೆ ಮಾತ್ರವಲ್ಲದೆ ಆಕೆಯ ತಾಯಿಯನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದ ಮನನೊಂದ ಸಂತ್ರಸ್ತೆಯು ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಕೋರಿ ದೂರು ನೀಡಿದ್ದಾರೆ ಇದೀಗ ಬನಶಂಕರಿ ಠಾಣೆಯಲ್ಲಿ ಪತಿ ಹಾಗೂ ಆತನ ತಂದೆ ತಾಯಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

