ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಆಕೆಗೆ ಮಗು ಕರುಣಿಸಿದ ನಂತರ ಮದುವೆಯಾಗಲು ನಿರಾಕರಿಸಿದ ಆರೋಪದ ಮೇಲೆ ಪುತ್ತೂರಿನ ಕೃಷ್ಣ ಜೆ.ರಾವ್ ನನ್ನು ಕೊನೆಗೂ ಬಂಧಿಸಲಾಗಿದೆ.
ಮದುವೆಯಾಗುವುದಾಗಿ ಭರವಸೆ ನೀಡಿ ಹಲವು ಬಾರಿ ಸಂತ್ರಸ್ತೆ ಜತೆ ದೈಹಿಕ ಸಂಪರ್ಕ ಬೆಳೆಸಿದ್ದ ಶ್ರೀ ಕ್ರಷ್ಣರಾವ್ ಆ ಬಳಿಕ ಯುವತಿ ಗರ್ಭವತಿಯಾಗಿರುವ ವಿಚಾರ ತಿಳಿದು ಮದುವೆಯಾಗಲು ನಿರಾಕರಿಸಿದ್ದ.ಈ ಹಿನ್ನಲೆ ಶ್ರೀ ಕೃಷ್ಣರಾವ್ ವಿರುದ್ಧ ಪುತ್ತೂರು ಮಹಿಳಾ ಠಾಣೆಗೆ ಸಂತ್ರಸ್ತೆ ದೂರು ನೀಡಿದ್ದಳು ಆರೋಪಿ ಕೃಷ್ಣ ಜೆ.ರಾವ್ ಮೇಲೆ ಎಫ್ಐಆರ್ ದಾಖಲಾದ ಬೆನ್ನಲ್ಲೇ ಪುತ್ತೂರಿನಿಂದ ನಾಪತ್ತೆಯಾಗಿದ್ದ. ಆತನನ್ನು ವಶಕ್ಕೆ ಪಡೆಯಲು ಕಳೆದ ಹತ್ತು ದಿನಗಳಿಂದ ಪೊಲೀಸರು ಹುಡುಕಾಟ ನಡೆಸುತ್ತಿದ್ದರು.ಕೊನೆಗೂ ಆರೋಪಿಯನ್ನು ಮೈಸೂರಿನ ಟಿ ನರಸೀಪುರ ಎಂಬಲ್ಲಿ ವಶಕ್ಕೆ ಪಡೆದ ಪೊಲೀಸರು ಪುತ್ತೂರಿಗೆ ಕರೆದುಕೊಂಡು ಬಂದಿದ್ದಾರೆ.ಸಂಜೆ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಮಗ ಪರಾರಿಯಾಗಲು ಸಹಕರಿಸಿದ ಆರೋಪದ ಮೇಲೆ ಆರೋಪಿಯ ತಂದೆ ಬಿಜೆಪಿ ಮುಖಂಡ ಪಿ.ಜೆ.ಜಗನ್ನಿವಾಸ್ ರಾವ್ ಅವರನ್ನು ತನಿಖೆಗೆ ಒಳಪಡಿಸಲು ಪೋಲಿಸರು ಬಂಧಿಸಿದ್ದರು ಇದೀಗ ಜಗನ್ನಿವಾಸ್ ರಾವ್ ಅವರಿಗೆ ಜಾಮೀನು ಮಂಜೂರಾಗಿದ್ದು ಅವರನ್ನು ಬಿಡುಗಡೆಗೊಳಿಸಲಾಗಿದೆ ಅವರ ಪರವಾಗಿ ನ್ಯಾಯವಾದಿ ಸುರೇಶ್ ರೈ, ಶ್ರೀಕಾಂತ್ ಹಾಗು ರಾಘವ.ಪಿ ವಾದಿಸಿದ್ದರು

