ಚಿಕ್ಕಮಗಳೂರು : ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ಗೆ ಕಾಫಿನಾಡು ಚಿಕ್ಕಮಗಳೂರಿಗೆ ಪ್ರವೇಶಿಸದಂತೆ ಒಂದು ತಿಂಗಳ ಕಾಲ ಸಂಪೂರ್ಣ ನಿರ್ಬಂಧ ಹೇರಿದೆ. ದಿನಾಂಕ ಜೂ. 6 ರಿಂದ ಆಗಸ್ಟ್ 4 ರವರೆಗೆ 30ದಿನಗಳ ಕಾಲ ಈ ಆದೇಶ ಜಾರಿಯಲ್ಲಿರಲಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಶರಣ್ ಪಂಪ್ವೆಲ್ ಮೇಲೆ 22ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ಚಿಕ್ಕಮಗಳೂರು, ಮೂಡಿಗೆರೆ, ಮತ್ತು ಆಲ್ದೂರಿನಲ್ಲಿ ಸಭೆ-ಸಮಾರಂಭಗಳನ್ನು ಆಯೋಜಿಸಿದ್ದರು.ಚಿಕ್ಕಮಗಳೂರು ಕೆಲವು ಪಟ್ಟಣಗಳು ಅತೀ ಸೂಕ್ಷ್ಮ ಪ್ರದೇಶವಾಗಿದ್ದು ಬಲಪಂಥೀಯ ನಿಲುವಿನಿಂದ ಪ್ರಭಾವಿತರಾಗಿರುವ ಶರಣ್ ಪಂಪ್ವೆಲ್ ಕೋಮು ದ್ವೇಷವನ್ನು ಉಂಟುಮಾಡುವ ಭಾಷಣಗಳನ್ನು ಮಾಡಿ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ಕಾರಣಕ್ಕಾಗಿ ಈ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ ಎಂದು ತಿಳಿದುಬಂದಿದೆ.

