ಮಂಗಳೂರು : ಗುರು ಪೂರ್ಣಿಮೆಯ ಪ್ರಯುಕ್ತ ಅಮೃತ ವಿದ್ಯಾಲಯಂ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳು ತಮ್ಮ ಶಿಕ್ಷಕ – ಶಿಕ್ಷಕೇತರ ಸಿಬ್ಬಂದಿಗಳ ಪಾದ ಪೂಜೆಯನ್ನು ಮಾಡುವ ಮೂಲಕ ವಿಶಿಷ್ಟ ರೀತಿಯಲ್ಲಿ ಸಂಸ್ಕೃತಿ ಪೂಜೆಯನ್ನು ನಡೆಸಿಕೊಟ್ಟರು.


ಶಿಕ್ಷಕ ಅಭಿಷೇಕ್ ಅವರ ನೇತೃತ್ವದಲ್ಲಿ ಪ್ರಾರ್ಥನೆ ಮತ್ತು ಭಜನೆಗಳೊಂದಿಗೆ ಕಾರ್ಯಕ್ರಮವು ಪ್ರಾರಂಭವಾಯಿತು,
ಶ್ರೀಮತಿ ಮೃದಲಾ ಅವರ ಮಾರ್ಗದರ್ಶನದಲ್ಲಿ ಶ್ರೀಮತಿ ರಶ್ಮಿ ಅವರು ಪಾದುಕಾ ಪೂಜೆಯನ್ನು ಶ್ರದ್ಧಾ, ಭಕ್ತಿ ಯಿಂದ ನೆರವೇರಿಸಿದರು.


ಶ್ರೀಮತಿ ಯೋಗಿತಾ ಅವರ ಮಾರ್ಗದರ್ಶನದಲ್ಲಿ, 10 ಮತ್ತು 9 ನೇ ತರಗತಿಯ ವಿದ್ಯಾರ್ಥಿಗಳು ಗುರುವಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಶ್ರೀಮತಿ ಯೋಗಿತಾ ಅವರು ಜೀವನವನ್ನು ರೂಪಿಸುವಲ್ಲಿ ಗುರುವಿನ ಪ್ರಮುಖ ಪಾತ್ರದ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.ಈ ಸಂಧರ್ಭದಲ್ಲಿ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಯಿತು,




