ಬೆಂಗಳೂರು : ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಮತ್ತು ಅವರ ಸ್ನೇಹಿತನೊಬ್ಬ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬೆಂಗಳೂರಿನ ಮಾರತಹಳ್ಳಿ ಪೋಲಿಸರು ಬಂಧಿಸಿದ್ದಾರೆ.

ಬಂಧಿತರನ್ನು ಫಿಜಿಕ್ಸ್ ಉಪನ್ಯಾಸಕ ನರೇಂದ್ರ, ಬಯಾಲಜಿ ಉಪನ್ಯಾಸಕ ಸಂದೀಪ್ ಹಾಗೂ ಅವರ ಗೆಳೆಯ ಅನೂಪ್ ಎಂದು ಗುರುತಿಸಲಾಗಿದೆ.ಯುವತಿ ಮೂಡಬಿದಿರೆಯ ಕಾಲೇಜಿನಲ್ಲಿ ಪಿಯುಸಿ ಕಲಿತ್ತಿದ್ದು ನಂತರ ಬೆಂಗಳೂರಿನ ಕಾಲೇಜಿನಲ್ಲಿ ಶಿಕ್ಷಣ ಮುಂದುವರಿಸುತ್ತಿದ್ದಳು.
ಫಿಜಿಕ್ಸ್ ಉಪನ್ಯಾಸಕ ನರೇಂದ್ರ ನೋಟ್ಸ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿ ಜತೆ ಹತ್ತಿರವಾಗಿದ್ದ ಇದೇ ನೆಪ ಮಾಡಿಕೊಂಡು ನಿರಂತರ ಮೊಬೈಲ್ ನಲ್ಲಿ ಚಾಟ್ ಮಾಡುವುದರ ಮೂಲಕ ತುಂಬಾ ಸಲುಗೆಯಿಂದ ಇದ್ದ ಇದೇ ಸಲುಗೆಯನ್ನು ದುರುಪಯೋಗಿಸಿ ಕೊಂಡು ಆಕೆ ಬೆಂಗಳೂರಿಗೆ ಬಂದ ನಂತರವೂ ಮಾರತಹಳ್ಳಿಯ ತನ್ನ ಗೆಳೆಯನ ರೂಮ್ ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ ಅಷ್ಟೇ ಅಲ್ಲದೆ ಈ ವಿಚಾರ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದ. ಬಳಿಕ ಅದೇ ಕಾಲೇಜಿನ ಬಯಾಲಜಿ ಉಪನ್ಯಾಸಕ ಸಂದೀಪ್ ನಿಗೆ ಈ ವಿಷಯವನ್ನು ತಿಳಿಸಿದ್ದ ಆತ ಸಹ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಆ ಸಂದರ್ಭದಲ್ಲಿ ಆಕೆ ವಿರೋಧ ವ್ಯಕ್ತಪಡಿಸಿದ್ದಳು. ಆಗ ‘ನೀನು ನರೇಂದ್ರನ ಜೊತೆಗೆ ಇರುವ ಫೋಟೊ ಮತ್ತೆ ವಿಡಿಯೋ ತನ್ನ ಬಳಿ ಇದೆ.ಅದನ್ನು ಕಾಲೇಜಿನಲ್ಲಿ ಎಲ್ಲರಿಗೂ ಗೊತ್ತಾಗುವಂತೆ ಮಾಡುವೆ’ ಎಂದು ಬ್ಲ್ಯಾಕ್ ಮೇಲ್ ಮಾಡಿ ಹೆದರಿಸಿ ಅತ್ಯಾಚಾರ ಎಸಗಿದ್ದ.

ವಿದ್ಯಾರ್ಥಿನಿ ಮೇಲೆ ನರೇಂದ್ರ ಮತ್ತು ಸಂದೀಪ್ ಅತ್ಯಾಚಾರ ಎಸಗಿದ ರೂಮ್ ಅವರಿಬ್ಬರ ಮಿತ್ರ ಅನೂಪ್ ಎಂಬಾತನದ್ದಾಗಿತ್ತು. ಘಟನೆ ಬೆನ್ನಲ್ಲೇ ವಿದ್ಯಾರ್ಥಿನಿಯನ್ನು ಸಂಪರ್ಕಿಸಿದ್ದ ಅನೂಪ್ ನನ್ನ ರೂಮ್ ನಲ್ಲಿ ಸಿಸಿ ಕ್ಯಾಮರಾ ಇದೆ’ ‘ನೀನು ನನ್ನ ರೂಮ್ ಗೆ ಬಂದಿರುವುದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ.ನೀನು ನನ್ನೊಡನೆ ಸಹಕರಿಸದ್ದಿದ್ದರೆ.ವಿಡಿಯೋವನ್ನು ಲೀಕ್ ಮಾಡುವೆ ಎಂದು ಅತನೂ ಬೆದರಿಕೆ ಹಾಕಿದ್ದ ಬಳಿಕ ಆತನೂ ಯುವತಿ ಮೇಲೆ ಅತ್ಯಾಚಾರ ನಡೆದ್ದಾನೆ.

ಉಪನ್ಯಾಸಕರನ್ನು ಎದುರಿಸಲು ಸಾಧ್ಯವಾಗದೆ ಆರಂಭದಲ್ಲಿ ಸುಮ್ಮನಿದ್ದ ವಿದ್ಯಾರ್ಥಿನಿ,ನಂತರ ಸಮಸ್ಯೆ ಹೆಚ್ಚಾಗಲು ಆರಂಭವಾದಾಗ ಕೃತ್ಯದ ಬಗ್ಗೆ ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ಪೊಷಕರು ಆಕೆಯನ್ನು ಮಹಿಳಾ ಆಯೋಗಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಆಕೆಗೆ ಕೌನ್ಸೆಲಿಂಗ್ ಮಾಡಿ ಪೊಲೀಸರಿಗೆ ದೂರು ಕೊಡಿಸಿದ್ದಾರೆ.
ಇದೀಗ ಮೂವರು ಆತ್ಯಾಚಾರಿಗಳನ್ನು ಬಂಧಿಸಿರುವ ಮಾರತಹಳ್ಳಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

