ಬೆಂಗಳೂರು : ಕನ್ನಡದ ಕಿರುತೆರೆಯ ಜನಪ್ರಿಯ ನಿರೂಪಕಿ ಅನುಶ್ರೀ ಅವರು ಹಸೆಮಣೆ ಏರಲು ಸಜ್ಜಾಗಿದ್ದಾರೆ.ಹಲವು ವರ್ಷಗಳಿಂದ ಅನುಶ್ರೀ ಅವರು ಯಾವಾಗ ಮದುವೆ ಆಗುತ್ತಾರೆ ಎನ್ನುವ ಪ್ರಶ್ನೆ ಅನೇಕರನ್ನು ಕಾಡುತ್ತಿತ್ತು.

ಪ್ರತಿ ವೇದಿಕೆ ಮೇಲೆ ಅವರ ಎದುರು ಮದುವೆ ಬಗ್ಗೆ ಪ್ರಶ್ನೆಗಳನ್ನು ಇಡಲಾಗುತ್ತಿತ್ತು.ಆದರೆ ಈ ವರ್ಷ ವಿವಾಹ ಆಗಿಯೇ ಆಗುತ್ತೇನೆ ಎಂದು ಅವರು ಭರವಸೆ ನೀಡಿದ್ದರು. ಈಗ ಅದು ನಿಜ ಆಗುತ್ತಿದೆ. ಅವರ ಮದುವೆಯ ಸುದ್ದಿ ಈಗ ಅಧಿಕೃತವಾಗುತ್ತಿದೆ.ಆಗಸ್ಟ್ 28 ಕ್ಕೆ ಅವರ ವಿವಾಹ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ವರದಿಯಾಗಿದೆ.

ಕೊಡಗು ಮೂಲದ ಬೆಂಗಳೂರು ಉದ್ಯಮಿ ರೋಷನ್ ಜೊತೆ ಅವರು ವಿವಾಹ ಆಗುತ್ತಿದ್ದಾರೆ. ಕುಟುಂಬದವರು ನೋಡಿದ ಹುಡುಗನ ಜೊತೆ ಅನುಶ್ರೀ ವಿವಾಹ ಆಗುತ್ತಿದ್ದಾರಂತೆ. ಎರಡೂ ಕುಟುಂಬಗಳು ಒಪ್ಪಿಕೊಂಡಿದ್ದು ಇದು ಪಕ್ಕಾ ಅರೇಂಜ್ ಮ್ಯಾರೇಜ್ ಆಗಿದ್ದು ಇಬ್ಬರ ಮನೆಗಳಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ.ಈ ಬಗ್ಗೆ ಅನುಶ್ರೀ ಅವರು ಇನ್ನೂ ಅಧಿಕೃತವಾಗಿ ಯಾವುದೇ ಮಾಹಿತಿ ನೀಡಿಲ್ಲ ಮುಂದಿನ ದಿನಗಳಲ್ಲಿ ಅವರು ಈ ಬಗ್ಗೆ ಮಾಹಿತಿ ರಿವೀಲ್ ಮಾಡೋ ಸಾಧ್ಯತೆ ಇದೆ.

