ಬೆಂಗಳೂರು : ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಿರಿಯ ಪುತ್ರ ಮಿಲಿಂದ್ ಖರ್ಗೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.ಹಲವು ಸಮಯದಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಮಿಲಿಂದ್ ಖರ್ಗೆ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.ಅವರ ಸ್ಥಿತಿ ಗಂಭೀರವಾಗಿದೆ.
ಖರ್ಗೆಯವರಿಗೆ ಐವರು ಮಕ್ಕಳಲ್ಲಿ ಇಬ್ಬರು ಹೆಣ್ಣು ಮೂವರು ಗಂಡು ಮಕ್ಕಳ ಪೈಕಿ ಕಿರಿಯವರಾದ ಮಿಲಿಂದ್ ಖರ್ಗೆ, ಯುನಿವರ್ಸಿಟಿ ಆಫ್ ಪೆನ್ಸಿಲ್ವೇನಿಯಾದ ವಾರ್ಟನ್ ಸ್ಕೂಲ್ನಿಂದ ಎಂಬಿಎ ಪದವೀಧರರಾಗಿದ್ದು, ಖಾಸಗಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಹಿರಿಯ ಸಹೋದರ ಪ್ರಿಯಾಂಕ್ ಖರ್ಗೆ ಹೊರತುಪಡಿಸಿದರೆ ಬೇರೆ ಯಾರಿಗೂ ರಾಜಕೀಯದಲ್ಲಿ ಆಸಕ್ತಿ ಇಲ್ಲ ಎನ್ನಲಾಗಿದೆ.

