ಕಾರವಾರ : ಜೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿಗಳು ಖ್ಯಾತಿಯ ಕಲಾವಿದ ಚಂದ್ರಶೇಖರ್ ಸಿದ್ದಿ ಖಿನ್ನತೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾಮಿಡಿ ಕಿಲಾಡಿಗಳು’ ಶೋ ಮೂಲಕ ಜನಮನ ಗೆದ್ದಿದ್ದ ನಟ ಚಂದ್ರಶೇಖರ್ ಸಿದ್ಧಿ ಯಲ್ಲಾಪುರದ ಅರಣ್ಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆ ಆಗಿದೆ.

ಯಲ್ಲಾಪುರ ತಾಲೂಕಿನ ಕಟ್ಟಿಗೆ ಗ್ರಾಮದ ಅರಣ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಹೆಚ್ಚಿನ ಕೆಲಸ ಇಲ್ಲದೇ ಚಂದ್ರಶೇಖರ್ ಸಿದ್ದಿ ಅವರು ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ಮೂರು ತಿಂಗಳಿಂದ ಖಿನ್ನತೆಗೆ ಒಳಗಾಗಿ ಜರ್ಜರಿತರಾಗಿದ್ದರು ಎನ್ನಲಾಗಿದೆ. ನಿನಾಸಂನಲ್ಲಿ ತರಬೇತಿ ಪಡೆದಿದ್ದ ಈತ ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ನಂತರ ಧಾರವಾಹಿಗಳಲ್ಲಿ ಚಿಕ್ಕಪುಟ್ಟ ಪಾತ್ರಗಳನ್ನು ಮಾಡುತ್ತಿದ್ದರು ಇವರಿಗೆ ಹೆಚ್ಚಿನ ಅವಕಾಶಗಳು ಹೆಚ್ಚು ಸಿಗಲಿಲ್ಲ. ಅಲ್ಲದೆ ಅವರ ಆರ್ಥಿಕ ಪರಿಸ್ಥಿತಿ ತುಂಬಾ ಕಷ್ಟಕರವಾಗಿತ್ತು. ಚಂದ್ರಶೇಖರ್ ಅವರ ಸಾವಿಗೆ ಸಂಬಂಧಿಸಿದಂತೆ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

