ಬೆಂಗಳೂರು : ವಿಕೆ ಫಿಲ್ಮಂ ಅಸೋಸಿಯೇಷನ್ ನಲ್ಲಿ ಗಾಣಿಗ ಫಿಲ್ಮ್ಸ್ನಲ್ಲಿ ನಿರ್ಮಾಣಾಗುತ್ತಿರುವ.ಗುರುದತ್ ಗಾಣಿಗ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಕರಾವಳಿ’ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಡೈನಾಮಿಕ್ ಫ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ಕರಾವಳಿ ಸಿನಿಮಾಗೆ ರಾಜ್ ಬಿ ಶೆಟ್ಟಿ ಎಂಟ್ರಿ ಕೊಟ್ಟಿದ್ದಾರೆ. ಬಹು ನಿರೀಕ್ಷಿತ ಚಿತ್ರಕ್ಕೆ ಸದ್ಯ ಸು ಫ್ರಮ್ ಸೋ ಚಿತ್ರದ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ರಾಜ್ ಬಿ ಶೆಟ್ಟಿ ಅವರ ಎಂಟ್ರಿಯಿಂದ ಕರಾವಳಿ ಚಿತ್ರದ ಮೇಲಿನ ನಿರೀಕ್ಷೆ ದುಪ್ಪಟ್ಟಾಗಿದೆ.

ಸದ್ಯ ರಾಜ್ ಬಿ ಶೆಟ್ಟಿ ಅವರ ಪಾತ್ರ ಪರಿಚಯದ ಟೀಸರ್ ರಿಲೀಸ್ ಆಗಿದೆ. ರಾಜ್ ಶೆಟ್ಟಿ ಲುಕ್ ಆಕರ್ಷಕಾಗಿದ್ದು ಯಾವ ಪಾತ್ರ ಎನ್ನುವ ಕುತೂಹಲ ಹೆಚ್ಚಾಗಿದೆ.
ಎರಡು ಕೋಣಗಳ ಮಧ್ಯೆ ನಿಂತು ದಿಟ್ಟಿಸಿ ನೋಡುತ್ತಿರುವ ರಾಜ್ ಬಿ ಶೆಟ್ಟಿ ಒಂದು ಕೈಯಲ್ಲಿ ಪಂಜು ಹಿಡಿದು ಕಾಣಿಸಿಕೊಂಡಿದ್ದಾರೆ. ರಾಜ್ ಲುಕ್ ನೋಡುತ್ತಿದ್ದರೆ ಕಂಬಳ ಓಡಿಸುವ ಓಟಗಾರನ ಅಥವಾ ಕಂಬಳ ನಡೆಸುವ ಕುಟುಂಬದ ಮಾವೀರ ಎನ್ನುವುದು ಕುತೂಹಲ ಮೂಡಿಸಿದೆ. ರಾಜ್ ಪಾತ್ರದ ಬಗ್ಗೆ ಸಿನಿಮಾ ತಂಡ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ಆದರೆ ಲುಕ್ ರಿಲೀಸ್ ಮಾಡುವ ಮೂಲಕ ಕರಾವಳಿ ಸಿನಿಮಾ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ ಚಿತ್ರ ತಂಡ.


