ಮುಂಬೈ: ಏಷ್ಯಾ ಕಪ್ ಕ್ರಿಕೆಟ್ ಸ್ಪರ್ಧೆಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಸೂರ್ಯಕುಮಾರ್ ಯಾದವ್ ತಂಡದ ನೇತೃತ್ವವಹಿಸಲಿದ್ದಾರೆ. ಸಂಜು ಸ್ಯಾಮ್ಸನ್ ಮತ್ತು ಜಿತೇಶ್ ಶರ್ಮಾ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ಆಗಿ ಸ್ಥಾನ ಪಡೆದಿದ್ದಾರೆ.ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ವೇಗದ ದಾಳಿಯನ್ನು ಮುನ್ನಡೆಸುತ್ತಾರೆ. ಅರ್ಶ್ದೀಪ್ ಸಿಂಗ್ ಮತ್ತು ಹರ್ಷಿತ್ ರಾಣಾ ಇತರ ವೇಗಿಗಳು. ವರುಣ್ ಚಕ್ರವರ್ತಿ ಮತ್ತು ಕುಲದೀಪ್ ಯಾದವ್ ತಂಡದಲ್ಲಿ ಸ್ಪಿನ್ನರ್ಗಳಾಗಿದ್ದಾರೆ.

ತಂಡಕ್ಕೆ ಸ್ಥಾನ ಪಡೆಯುವ ನಿರೀಕ್ಷೆಯಿದ್ದ ಶ್ರೇಯಸ್ ಅಯ್ಯರ್, ಯಶಸ್ವಿ ಜೈಸ್ವಾಲ್ ಮತ್ತು ಮೊಹಮ್ಮದ್ ಸಿರಾಜ್ 15 ಸದಸ್ಯರ ಪಟ್ಟಿಯಲ್ಲಿ ಸ್ಥಾನ ಇಲ್ಲ.

ಈ ವರ್ಷದ ಟಿ20 ಮಾದರಿಯ ಏಷ್ಯಾಕಪ್ ಟೂರ್ನಿಯು ಯುಎಇಯಲ್ಲಿ ನಡೆಯುತ್ತಿದೆ. ಸೆಪ್ಟೆಂಬರ್ 9 ರಂದು ಆರಂಭವಾಗುವ ಟೂರ್ನಿಯು 28 ರಂದು ಫೈನಲ್ ಪಂದ್ಯ ನಡೆಯಲಿದೆ. ಆರು ತಂಡಗಳು ಭಾಗವಹಿಸಲಿರುವ ಈ ಟೂರ್ನಿಯಲ್ಲಿ ಒಟ್ಟು 19 ಪಂದ್ಯಗಳು ನಡೆಯಲಿವೆ.

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷ್ದೀಪ್ ಸಿಂಗ್, ವರುಣ್ ಚಕ್ರವರ್ತಿ, ಕುಲದೀಪ್ ಯಾದವ್, ಸಂಜು ಸ್ಯಾಮ್ಸನ್, ರಿಂಕು ಸಿಂಗ್.

