ಉಜಿರೆ : ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಕುರಿತು ಆಗಸ್ಟ್ 16 ರಂದು ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಗ್ರಾಮಾಂತರ ಬಿಜೆಪಿಯ ಮಂಡಲಾಧ್ಯಕ್ಷ ರಾಜೀವ ಕುಲಾಲ್ ಅವರು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸಿದ್ದರು. ಈ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯ ಪೊಲೀಸರು ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಉಜಿರೆಯಲ್ಲಿನ ಅವರ ಮನೆಯಲ್ಲಿ ವಶಕ್ಕೆ ಪಡೆದರು.
ಈ ವೇಳೆ ಭಾರಿ ಸಂಖ್ಯೆಯಲ್ಲಿ ನೆರೆದಿದ್ದ ಮಹೇಶ್ ಶೆಟ್ಟಿ ಅವರ ಬೆಂಬಲಿಗರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಕೆಲ ಹೊತ್ತು ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು.

