ಮಂಗಳೂರು : ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ಬಳಿಕ ಯೂಟ್ಯೂಬರ್ ಸಮೀರ್ ಎಂಡಿ ಬಂಧನ ಭೀತಿ ಎದುರಿಸುತ್ತಿದ್ದು ಇದೀಗ ಮಂಗಳೂರು ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಧರ್ಮಸ್ಥಳದ ಶವ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿ ಹರಡಿದ ಆರೋಪದ ಮೇಲೆ ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಸಂಬಂಧ ಧರ್ಮಸ್ಥಳ ಪೊಲೀಸರು ಸಮೀರ್ ನನ್ನು ಬಂಧಿಸಲು ಬೆಳಿಗ್ಗೆಯಿಂದಲೇ ಬನ್ನೇರುಘಟ್ಟದಲ್ಲಿರುವ ಸಮೀರ್ ಮನೆಯನ್ನು ಸುತ್ತುವರಿದಿದ್ದು .ಬಂಧನ ಭೀತಿ ಹಿನ್ನೆಲೆಯಲ್ಲಿ ಸಮೀರ್ ಮಂಗಳೂರಿನ ಜಿಲ್ಲಾ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದ ಇಂದು ಸಂಜೆ 4 ಗಂಟೆಗೆ ಜಾಮೀನು ಮಂಜೂರಾಗಿದ್ದು ಬಂಧನ ಭೀತಿಯಿಂದ ಪಾರಾಗಿದ್ದಾನೆ

