ಬೆಂಗಳೂರು : ಟ್ರಾಫಿಕ್ ಉಲ್ಲಂಘನೆ ಮಾಡಿ ದಂಡ ಪಾವತಿಸದೇ ಇರುವ ವಾಹನ ಮಾಲೀಕರಿಗೆ ಒಂದು ಗುಡ್ ನ್ಯೂಸ್ ಸಾರಿಗೆ ಇಲಾಖೆ ನೀಡಿದ್ದು. ಸಾರಿಗೆ ಇಲಾಖೆ ಮತ್ತೊಮ್ಮೆ ರಿಯಾಯಿತಿ ಘೋಷಿಸಿ ಆದೇಶಿಸಿದೆ.
ಸಂಚಾರಿ ನಿಯಮ ಉಲ್ಲಂಘಿಸಿ ದಂಡ ಕಟ್ಟದ ವಾಹನ ಮಾಲೀಕರಿಗೆ ಬರೋಬ್ಬರಿ ಶೇಕಡಾ 50ರಷ್ಟು ರಿಯಾಯಿತಿ ನೀಡಲಾಗಿದೆ. ಈ ಕುರಿತು ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಅಧಿಕೃತ ಆದೇಶ ಹೊರಡಿಸಿದ್ದು, ದಂಡದ ಅರ್ಧದಷ್ಟು ಹಣ ತುಂಬಲು ವಾಹನ ಸವಾರರಿಗೆ ಅವಕಾಶ ಕಲ್ಪಿಸಲಾಗಿದ್ದು, ದಂಡ ಪಾವತಿ ಮಾಡಲು ಆಗಸ್ಟ್ 23 ರಿಂದ ಸೆಪ್ಟೆಂಬರ್ 12ರವರೆಗೆ ಮಾತ್ರ ಅವಕಾಶ ನೀಡಲಾಗಿದೆ

ಈ ಆಫರ್ ಪೋಲಿಸ್ ಇಲಾಖೆಯಲ್ಲಿ ಸಂಚಾರಿ ಇ- ಚಲನ್ ನಲ್ಲಿ 2023 ರ ಫೆಬ್ರವರಿ 11ರವರೆಗೆ ದಾಖಲಾದ ಪ್ರಕರಣಗಳಿಗೆ ಅನ್ವಯವಾಗಲಿದೆ. 2023ರ ಫೆಬ್ರವರಿ 12ರ ನಂತರದ ಪ್ರಕರಣಗಳಿಗೆ ಇದು ಅನ್ವಯವಾಗುವುದಿಲ್ಲ.ಬಹಳ ವರ್ಷಗಳಿಂದ ಟ್ರಾಫಿಕ್ ದಂಡ ಕಟ್ಟದೇ ಹಾಗೇ ಬಾಕಿ ಉಳಿಸಿಕೊಂಡವರಿಗೆ ಈ 50% ಆಫರ್ ನೀಡಲಾಗಿದೆ. ಇನ್ನುಳಿದಂತೆ 2023ರ ಫೆಬ್ರವರಿ 12ರ ನಂತರದ ಕೇಸ್ ಗಳಿಗೆ ಮುಂದಿನ ವರ್ಷ ಆಫರ್ ನೀಡುವ ಸಾಧ್ಯತೆಗಳಿವೆ.

