ಉಡುಪಿ : ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾದ ಸೌಜನ್ಯ ಪರ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಉಡುಪಿ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಬಿಜೆಪಿ ಮಂಡಲ ಅಧ್ಯಕ್ಷ ರಾಜೀವ್ ಕುಲಾಲ್ ಅವರ ದೂರಿನ ಆಧಾರದ ಮೇಲೆ ಬ್ರಹ್ಮಾವರ ಪೊಲೀಸರು ಮಹೇಶ್ ಶೆಟ್ಟಿ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 196 (1), 352 ಮತ್ತು 353 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು ಈ ಹಿನ್ನೆಲೆಯಲ್ಲಿ ಆಗಸ್ಟ್ 21 ರ ಗುರುವಾರ ಉಡುಪಿ ಜಿಲ್ಲಾ ಪೊಲೀಸರು ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬಂಧಿಸಿದ್ದರು ನಂತರ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು

