ನವದೆಹಲಿ: ಭಾರತದ ಮಾಜಿ ನಾಯಕ ಮತ್ತು ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಕ್ರಿಕೆಟ್ನಲ್ಲಿ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಈ ಬಾರಿ ದಕ್ಷಿಣ ಆಫ್ರಿಕಾದ ಟಿ20 ಫ್ರಾಂಚೈಸಿ ಪ್ರಿಟೋರಿಯಾ ಕ್ಯಾಪಿಟಲ್ಸ್ನ ಮುಖ್ಯ ಕೋಚ್ ಆಗಿ ಗಂಗೂಲಿ ನೇಮಕಗೊಂಡಿದ್ದಾರೆ.
ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡವು ಸಾಮಾಜಿಕ ಮಾಧ್ಯಮದಲ್ಲಿ ಈ ವಿಷಯವನ್ನು ಹಂಚಿಕೊಂಡಿದೆ. ಗಂಗೂಲಿ ವೃತ್ತಿಪರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿರುವುದು ಇದೇ ಮೊದಲು. ಇಂಗ್ಲೆಂಡ್ನ ಮಾಜಿ ಆಟಗಾರ ಜೊನಾಥನ್ ಟ್ರಾಟ್ ಅವರ ನಂತರ ಗಂಗೂಲಿ ತಂಡದ ಕೋಚ್ ಆಗಿ ನೇಮಕಗೊಂಡಿದ್ದಾರೆ. SA20 ಟೂರ್ನಮೆಂಟ್ನಲ್ಲಿ ತಂಡವನ್ನು ಮುನ್ನಡೆಸುವುದು ಗಂಗೂಲಿ ಎದುರಿಸುತ್ತಿರುವ ಪ್ರಮುಖ ಸವಾಲಾಗಿದೆ.

ಗಂಗೂಲಿ ಜೊತೆಗೆ ಪ್ರಿಟೋರಿಯಾ ಕ್ಯಾಪಿಟಲ್ಸ್ ಶಾನ್ ಪೊಲಾಕ್ ಅವರನ್ನು ತಂಡದ ಸಹಾಯಕ ಕೋಚ್ ಆಗಿ ನೇಮಕ ಮಾಡುವುದಾಗಿ ಘೋಷಿಸಿತು.
ಗಂಗೂಲಿ 2008 ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತರಾದರು. ನಂತರ ಅವರು ಬಿಸಿಸಿಐ ಅಧ್ಯಕ್ಷರು ಸೇರಿದಂತೆ ಹಲವಾರು ಹುದ್ದೆಗಳನ್ನು ಅಲಂಕರಿಸಿದರು. ಅವರು ಡೆಲ್ಲಿ ಕ್ಯಾಪಿಟಲ್ಸ್ನ ಮಾರ್ಗದರ್ಶಕ ಮತ್ತು ತಂಡದ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದರು.

