ಉಡುಪಿ :ಸತತ 9 ದಿನಗಳು 216 ಗಂಟೆಗಳ ಕಾಲ ನಿರಂತರವಾಗಿ ಭರತನಾಟ್ಯ ಪ್ರದರ್ಶನ ನೀಡುವ ಮೂಲಕ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಆರೂರು ಗ್ರಾಮದ ವಿಧುಷಿ ದೀಕ್ಷಾ ಹೊಸ ದಾಖಲೆಯನ್ನು ಬರೆದಿದ್ದಾರೆ.

ವಿಧುಷಿ ದೀಕ್ಷಾ ಉಡುಪಿ ಅಜ್ಜರಕಾಡು ಡಾ.ಜಿ.ಶಂಕರ್ ಮಹಿಳಾ ಸ್ನಾತಕೋತ್ತರ ಕಾಲೇಜು ಸಭಾಂಗಣದಲ್ಲಿ ಆ. 21 ರಂದು ಮಧ್ಯಾಹ್ನ 3.30 ಗಂಟೆಗೆ ಭರತನಾಟ್ಯದ ಪ್ರದರ್ಶನವನ್ನು ಆರಂಭಿಸಿ, ಆ. 30 ರ ಮಧ್ಯಾಹ್ನ 3.30 ಕ್ಕೆ ಪೂರ್ಣಗೊಳಿಸಿ, ಈ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ಸ್ಥಾನ ಪಡೆದಿದ್ದಾರೆ.

ಕೆಲ ತಿಂಗಳ ಹಿಂದೆಯಷ್ಟೇ ಮಂಗಳೂರಿನ ಭರತನಾಟ್ಯ ಕಲಾವಿದೆ ರೆಮೋನಾ ಪಿರೇರಾ ಅಲೋಶಿಯಸ್ ಕಾಲೇಜಿನ ಸಭಾಂಗಣದಲ್ಲಿ ಸತತ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿ ವಿಶ್ವ ದಾಖಲೆ ನಿರ್ಮಿಸಿದ್ದರು.ಇದೀಗ ವಿಧುಷಿ ದೀಕ್ಷಾ ಸತತ 216 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿ ಹೊಸ ದಾಖಲೆ ಬರೆದಿದ್ದಾರೆ. ಮಂಗಳೂರಿನ ರೆಮೋನಾ ಅವರು ಸ್ಥಾಪಿಸಿದ ವಿಶ್ವ ದಾಖಲೆಯನ್ನು ಮುರಿದು ಹೊಸ ಇತಿಹಾಸ ಸೃಷ್ಟಿಸಿದರು


