ಬೆಂಗಳೂರು: ಸಂಚಾರಿ ನಿಯಮ ಉಲ್ಲಂಘಿಸಿ ದಂಡ ಕಟ್ಟದ ವಾಹನ ಮಾಲೀಕರಿಗೆ ಬರೋಬ್ಬರಿ ಶೇಕಡಾ 50ರಷ್ಟು ರಿಯಾಯಿತಿ ನೀಡಲಾಗಿದ್ದು ದಂಡದ ಅರ್ಧದಷ್ಟು ಹಣ ತುಂಬಲು ವಾಹನ ಸವಾರರಿಗೆ ಅವಕಾಶ ಕಲ್ಪಿಸಲಾಗಿತ್ತು. ಅಲ್ಲದೆ ದಂಡ ಪಾವತಿ ಮಾಡಲು ಆಗಸ್ಟ್ 23 ರಿಂದ ಸೆಪ್ಟೆಂಬರ್ 12ರವರೆಗೆ ಅವಕಾಶ ನೀಡಲಾಗಿತ್ತು. ಇದೀಗ ಹನ್ನೊಂದು ದಿನಗಳಲ್ಲಿ ಬರೋಬ್ಬರಿ 31 ಕೋಟಿಗೆ ಹೆಚ್ಚು ದಂಡ ಸಂಗ್ರಹವಾಗಿದೆ.

ಕಳೆದ 11 ದಿನದಲ್ಲಿ ಒಟ್ಟು 11,32,991 ಕೇಸ್ ಗಳನ್ನು ವಿಲೇವಾರಿ ಮಾಡಿ 31 ಕೋಟಿ 87 ಲಕ್ಷ 06 ಸಾವಿರದ 850 ರೂ. ದಂಡ ಸಂಗ್ರಹ ಮಾಡಲಾಗಿದೆ ಎಂದು ಬೆಂಗಳೂರು ಸಂಚಾರಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇನ್ನೂ ಒಂಬತ್ತು ದಿನಗಳ ಕಾಲ ರಿಯಾಯಿತಿ ದರದಲ್ಲಿ ದಂಡ ಕಟ್ಟಲು ಅವಕಾಶವಿದ್ದು, ಸುಮಾರು 50 ಕೋಟಿಗೂ ಮಿಕ್ಕಿ ದಂಡ ಸಂಗ್ರಹವಾಗುವ ಸಾಧ್ಯತೆ ಇದೆ ಎನ್ನಲಾಗಿದೆ

