ಹುಬ್ಬಳ್ಳಿ: 2024ರ ಏಪ್ರಿಲ್ನಲ್ಲಿ ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಪ್ರಥಮ ವರ್ಷದ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ್ (23 ವರ್ಷ) ಅವರನ್ನು ಎ.18ರಂದು ಕಾಲೇಜು ಆವರಣದಲ್ಲಿ ಚೂರಿ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿ ಫಯಾಜ್ನ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಈ ಮೊದಲು ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಫಯಾಜ್ ಅವರ ಜಾಮೀನು ತಿರಸ್ಕೃತಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಜಾಮೀನು ಅರ್ಜಿಯನ್ನು ಇಂದು ಧಾರವಾಡ ಹೈಕೋರ್ಟ್ ಸಹ ವಜಾಗೊಳಿಸಿ ಆದೇಶ ಹೊರಡಿಸಿದೆ.

ಏಪ್ರಿಲ್ 2024 ರಲ್ಲಿ ವಿಶ್ವವಿದ್ಯಾನಿಲಯದ ಆವರಣದಲ್ಲಿ ಕಾಂಗ್ರೆಸ್ ಕೌನ್ಸಿಲರ್ ನಿರಂಜನ್ ಹಿರೇಮಠ್ ಅವರ ಪುತ್ರಿ ಪ್ರಥಮ ವರ್ಷದ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ್ ಅವರನ್ನು ಆರೋಪಿ ಫಯಾಜ್ ಇರಿದು ಕೊಂದಿದ್ದ.ನಂತರ ಸ್ಥಳದಿಂದ ಪರಾರಿಯಾಗಿದ್ದ ಫಯಾಜ್ನನ್ನು ಅದೇ ದಿನ ಬಂಧಿಸಲಾಯಿತು. ಈ ಆಘಾತಕಾರಿ ಕೊಲೆಗೆ ದೇಶಾದ್ಯಂತ “ಲವ್ ಜಿಹಾದ್” ವಿರುದ್ಧ ವ್ಯಾಪಕ ಖಂಡನೆ ಮತ್ತು ಪ್ರತಿಭಟನೆ ವ್ಯಕ್ತವಾಗಿತ್ತು.


