
ದುಬೈ : 2025ನೇ ಸಾಲಿನ ದಕ್ಷಿಣ ಭಾರತ ಅಂತರರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ (SIIMA) ಕಾರ್ಯಕ್ರಮ ದುಬೈನಲ್ಲಿ ಶುಕ್ರವಾರ ರಾತ್ರಿ ಬಹಳ ಅದ್ಧೂರಿಯಾಗಿ ನಡೆದಿದೆ. 2024ನೇ ಸಾಲಿನಲ್ಲಿ ಬಿಡುಗಡೆಯಾದ ಸಿನಿಮಾಗಳಿಗೆ ಅವಾರ್ಡ್ ಘೋಷಣೆ ಮಾಡಲಾಗಿದೆ.
‘ಮ್ಯಾಕ್ಸ್’ ಚಿತ್ರದ ಅಭಿನಯಕ್ಕಾಗಿ ಕಿಚ್ಚ ಸುದೀಪ್ ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದರೆ, ‘02’ ನಟನೆಗೆ ಆಶಿಕಾ ರಂಗನಾಥ್ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ. ‘ಯುಐ’ ಚಿತ್ರದ ನಿರ್ದೇಶನಕ್ಕಾಗಿ ಉಪೇಂದ್ರ ಅವರಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಪಡೆದರು ಹಾಗೂ ‘ಭೀಮ’ ಚಿತ್ರದ ನಟನೆಗೆ ದುನಿಯಾ ವಿಜಯ್ ಅವರಿಗೆ ಅತ್ಯುತ್ತಮ ನಟ( ಕ್ರಿಟಿಕ್ಸ್) ಅವಾರ್ಡ್ ದೊರೆತಿದೆ. ‘ಕೃಷ್ಣಂ ಪ್ರಣಯ ಸಖಿ’ ಅತ್ಯುತ್ತಮ ಸಿನಿಮಾ ಪ್ರಶಸ್ತಿಗಳಿಸಿದೆ.

.
ಸೈಮಾ 2025 ಪ್ರಶಸ್ತಿ ಪುರಸ್ಕೃತರ ಪಟ್ಟಿ (ಕನ್ನಡ ಚಲನಚಿತ್ರ)
ಅತ್ಯುತ್ತಮ ಸಂಗೀತ ಸಂಯೋಜನೆ: ಬಿ. ಅಜನೀಶ್ ಲೋಕನಾಥ್ (ಮ್ಯಾಕ್ಸ್)
ಅತ್ಯುತ್ತಮ ಹಾಸ್ಯನಟ: ಜಾಕ್ ಸಿಂಗಂ (ಭೀಮ)
ಅತ್ಯುತ್ತಮ ಚೊಚ್ಚಲ ನಿರ್ದೇಶಕ ಪ್ರಶಸ್ತಿ: ಸಂದೀಪ್ ಸುಂಕದ್ (ಶಾಖಾಹಾರಿ)
ಅತ್ಯುತ್ತಮ ಚೊಚ್ಚಲ ನಟ- ಸಮರ್ಜಿತ್ ಲಂಕೇಶ್ (ಗೌರಿ)
ಭರವಸೆ ಮೂಡಿಸಿದ ಹೊಸ ಪ್ರತಿಭೆ- ಸನ್ಯಾ ಅಯ್ಯರ್ (ಗೌರಿ)
ಅತ್ಯುತ್ತಮ ಚೊಚ್ಚಲ ನಟಿ – ಅಂಕಿತಾ ಅಮರ್ (ಇಬ್ಬನಿ ತಬ್ಬಿದಾ ಇಳೆಯಲಿ)
ಅತ್ಯುತ್ತಮ ಸಾಂಗ್ ಡಿಸೈನ್- ಇಮ್ರಾನ್ ಎಸ್ ಸರ್ಧಾರಿಯಾ
ಅತ್ಯುತ್ತಮ ಛಾಯಾಗ್ರಹಣ: ಶ್ರೀವತ್ಸನ್ ಸೆಲ್ವರಾಜನ್ (ಇಬ್ಬನಿ ತಬ್ಬಿದ ಇಳೆಯಲಿ)
ಅತ್ಯುತ್ತಮ ಹಿನ್ನೆಲೆ ಗಾಯಕಿ – ಐಶ್ವರ್ಯ ರಂಗರಾಜನ್
ಅತ್ಯುತ್ತಮ ಗಾಯಕ – ಜಸ್ಕರನ್
ಅತ್ಯುತ್ತಮ ಚಿತ್ರ ಸಾಹಿತಿ – ಡಾ. ವಿ. ನಾಗೇಂದ್ರ ಪ್ರಸಾದ್
ಟಾಲಿವುಡ್ನಲ್ಲಿ ಪುಷ್ಪ 2 ಚಿತ್ರದ ನಟನೆಗಾಗಿ ಅಲ್ಲು ಅರ್ಜುನ್ ಉತ್ತಮ ನಟ ಪ್ರಶಸ್ತಿ ಪಡೆದಿದ್ದು, ಉತ್ತಮ ನಟಿ ಪ್ರಶಸ್ತಿ ಪುಷ್ಪ 2 ಅಭಿನಯಕ್ಕಾಗಿ ರಶ್ಮಿಕಾ ಮಂದಣ್ಣಗೆ ಸಿಕ್ಕಿದೆ.

‘ಪುಷ್ಪ 2’ ಚಿತ್ರದ ನಿರ್ದೇಶನಕ್ಕೆ ಸುಕುಮಾರ್ ಅವರಿಗೆ ಅತ್ಯುತ್ತಮ ನಿರ್ದೇಶನ ಪ್ರಶಸ್ತಿ ಸಿಕ್ಕಿದೆ. ದೇವಿ ಶ್ರೀ ಪ್ರಸಾದ್ ಅವರು ಇದೇ ಚಿತ್ರದ ಸಂಗೀತ ಸಂಯೋಜನೆಗಾಗಿ ಅತ್ಯುತ್ತಮ ಸಂಗೀತ ಸಂಯೋಜಕ ಅವಾರ್ಡ್ ಪಡೆದುಕೊಂಡಿದ್ದಾರೆ.


