ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದೀಗ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿದ್ದಾನೆ,ಸಾಮಾನ್ಯ ಕೈದಿಗಳಂತೆ ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್ ಜೈಲಿನಲ್ಲಿ ಕೈದಿಗಳಿಗೆ ಇರುವ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಇದರಲ್ಲಿ ಭಾಗವಾಗಿ ಜೈಲಾಧಿಕಾರಿಗಳು ಪ್ರಜ್ವಲ್ ರೇವಣ್ಣರನ್ನು ಗ್ರಂಥಾಲಯದ ಸಹಾಯಕನಾಗಿ ನೇಮಿಸಿದ್ದಾರೆ .ಪುಸ್ತಕಗಳನ್ನು ವಿತರಿಸುವುದು ಮತ್ತು ನೋಂದಣಿ ಮಾಡುವ ಕೆಲಸವನ್ನು ನಿರ್ವಹಿಸುತ್ತಿದ್ದಾರೆ. ಸದ್ಯಕ್ಕೆ ಪ್ರಜ್ವಲ್ ರೇವಣ್ಣ ಅವರು ಒಂದು ದಿನದ ಮಟ್ಟಿಗೆ ಕೆಲಸ ಮಾಡಿದ್ದು, ದಿನಗೂಲಿಯಾಗಿ 522 ರೂಪಾಯಿಗಳನ್ನು ಸಂಬಳವಾಗಿ ಪಡೆಯುತ್ತಿದ್ದಾರೆ. ಕೆಲಸಕ್ಕೆ ಹಾಜರಾಗದಿದ್ದರೆ ಸಂಬಳ ನೀಡಲಾಗುವುದಿಲ್ಲ.
ನ್ಯಾಯಾಲಯದ ವಿಚಾರಣೆಗಾಗಿ ಆಗಾಗ ಬರಬೇಕಾಗಿರುವುದರಿಂದ ಮತ್ತು ವಕೀಲರೊಂದಿಗೆ ಇತರ ಪ್ರಕರಣಗಳ ಚರ್ಚೆಗಾಗಿ ಸಮಯ ಬೇಕಾಗಿರುವ ಕಾರಣ, ಅವರನ್ನು ಪೂರ್ಣ ಸಮಯದ ಕೆಲಸಕ್ಕೆ ನಿಯೋಜಿಸಿಲ್ಲ. ಈ ಹಣವನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆಯಾಗಲಿದೆ. ತಮ್ಮ ದುಡಿಮೆ ಹಣ ಬಳಸಿಕೊಂಡು ಜೈಲಿನಲ್ಲಿ ಅಗತ್ಯ ವಸ್ತುಗಳ ಖರೀದಿ ಮಾಡಬಹುದು ಅಥವಾ ತಮ್ಮ ಕುಟುಂಬದವರಿಗೆ ಆ ಹಣ ಕಳುಹಿಸಬಹುದಾಗಿದೆ.

