ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಸಹಕಾರಿ ಪಿತಾಮಹಾ ದಿ| ಮೊಳಹಳ್ಳಿ ಶಿವರಾವ್ ಸ್ಮರಣಾರ್ಥ 2024-25ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹತ್ತನೇ ತರಗತಿ ಹಾಗೂ ಪದವಿಪೂರ್ವ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳಿಸಿ ಸಾಧನೆಗೈದವಿದ್ಯಾರ್ಥಿ,ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಮತ್ತು ಸಿಬ್ಬಂದಿಗಳ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನ ಸಮಾರಂಭವನ್ನು ಆಯೋಜಿಸಲಾಗಿತ್ತು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್, ವಹಿಸಿದ್ದರು.ಈ ಸಂದರ್ಭದಲ್ಲಿ ಭರತನಾಟ್ಯದಲ್ಲಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ ಉಡುಪಿಯ ವಿದುಷಿ ದೀಕ್ಷಾ ವಿ. ಅವರನ್ನು ಅವರನ್ನು ಗೌರವಿಸಲಾಯಿತು.

ತನುಶ್ರೀ ಪಿತ್ರೋಡಿ ಯೋಗ ಕಾರ್ಯಕ್ರಮ ನೀಡಿದರು ನಂತರ ಪ್ರತಿಭಾ ಪುರಸ್ಕಾರ ನೆರವೇರಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿಯವರು ಸಹಕಾರಿ ಕ್ಷೇತ್ರ ಬೆಳೆಯುವಲ್ಲಿ ಮೊಳಹಳ್ಳಿ ಶಿವರಾಯರು ಭದ್ರ ಬುನಾದಿ ಹಾಕಿದವರು. ಸಹಕಾರಿ ಕ್ಷೇತ್ರಕ್ಕೆ ಅವರ ಕೊಡುಗೆ ದೊಡ್ಡದಿದೆ ಎಂದರು. ವಿದ್ಯಾರ್ಥಿಗಳು ಶೈಕ್ಷಣಿಕ, ವಿಶ್ಲೇಷಣಾತ್ಮಕ ಮತ್ತು ತಾಂತ್ರಿಕ ಸೇರಿ ಮೂರು ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು ಎಂದರು.ಸಾಧಕರ ಪರಿಶ್ರಮ ಇತರರಿಗೆ ಗೊತ್ತಾಗಬೇಕು. ಪುರಸ್ಕಾರ ಪಡೆದವರು ಇನ್ನೂ ಉನ್ನತ ಮಟ್ಟಕ್ಕೆ ಏರಿ ಸಾಧನೆ ಮಾಡಿ ಸಮಾಜದಲ್ಲಿ ಇತರರಿಗೆ ಸಹಾಯ ಮಾಡುವಂತಾಗಬೇಕು ಎಂದರು.



ಸಮಾರಂಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಭಾಸ್ಕರ್ ಎಸ್. ಕೋಟ್ಯಾನ್, ಎಂ. ವಾದಿರಾಜ ಶೆಟ್ಟಿ, ಶಶಿಕುಮಾರ್ ರೈ ಬಿ., ದೇವಿಪ್ರಸಾದ್ ಶೆಟ್ಟಿ, ಎಸ್. ಬಿ. ಜಯರಾಮ ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಎಂ. ಮಹೇಶ್ ಹೆಗ್ಡೆ, ಬಿ,. ಕೆ.ಜೈರಾಜ್ ಬಿ.ರೈ, ಎಸ್.ಎನ್. ಮನ್ಮಥ, ರಾಜೇಶ್ ರಾವ್, ಸದಾಶಿವ ಉಳ್ಳಾಲ್, ಸ್ಕ್ಯಾಡ್ಸ್ ಅಧ್ಯಕ್ಷರಾದ ರವೀಂದ್ರ ಕಂಬಳಿ ಉಪಸ್ಥಿತರಿದ್ದರು.ಬ್ಯಾಂಕ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಿನಾಥ್ ಭಟ್ ಕೆ ಸ್ವಾಗತಿಸಿದರು. ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಸ್ವಾಗತಿಸಿದರು.ಡಿಜಿಎಂ ನಿತ್ಯಾನಂದ ಶೇರಿಗಾರ್ ವಂದಿಸಿದರು.

