ಶಿವಮೊಗ್ಗ : ಈದ್ ಮಿಲಾದ್ ಮೆರವಣಿಗೆ ವೇಳೆ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ.

ಭದ್ರಾವತಿಯ ತರಿಕೇರಿ ರಸ್ತೆಯ ಗಾಂಧಿ ವ್ರತ್ತದ ಬಳಿ ರಾತ್ರಿ 8 ಗಂಟೆ ವೇಳೆಗೆ ಮೆರವಣಿಗೆ ಸಾಗುತ್ತಿದ್ದಾಗ ಮೆರವಣಿಗೆಯಲ್ಲಿ ಇದ್ದವರು ‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗುತ್ತಿರುವುದನ್ನು ತೋರಿಸುವ 12 ಸೆಕೆಂಡುಗಳ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಈ ಬಗ್ಗೆ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಹಿಂದೂ ಸಂಘಟನೆಗಳು ಆಗ್ರಹಿಸಿವೆ.ಈ ಕುರಿತು ಪ್ರತಿಕ್ರಿಯಿಸಿರುವ ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಅವರು ಪಾಕ್ ಪರ ಘೋಷಣೆ ಕೂಗಿರುವ ಬಗ್ಗೆ ಮಾಹಿತಿ ಬಂದಿದೆ. ಈದ್ ಮಿಲಾದ್ ಮೆರವಣಿಗೆಯ ಬಗ್ಗೆ ವಿಡಿಯೋ ಮಾಡಲಾಗಿದೆ. ವಿಡಿಯೋವನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗುವುದು. ಘಟನೆ ಸಂಬಂಧ ತನಿಖೆ ನಡೆಸಲು ಮೂರು ತಂಡಗಳನ್ನು ರಚಿಸಲಾಗಿದೆ .ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ

